ಉಡುಪಿ :ಉಡುಪಿ ಜಿಲ್ಲೆಯಲ್ಲಿ ಸ್ಥಳೀಯ ಭಾಷೆಗಳಾದ ತುಳು ಕೊಂಕಣಿ ಮತ್ತಿತರ ಭಾಷೆಗಳಿವೆ ಇವೆಲ್ಲವನ್ನು ಅನ್ಯ ಭಾಷೆಗಳೆಂದು ಭಾವಿಸದೆ ಈ ಅಚ್ಚಗನ್ನಡದ ಜಿಲ್ಲೆಯಲ್ಲಿ ಯಾರನ್ನು ಇವನಾರವ ಇವನಾರವ ಎನ್ನದೆ ಇವ ನಮ್ಮವ ಇವ ನಮ್ಮವ ಎಂದು ಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು ಅವರು ಬುಧವಾರ ಜಿಲ್ಲಾಡಳಿತ ಉಡುಪಿ ಜಿಲ್ಲೆ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು
ಲಕ್ಷ್ಮೀನಾರಾಯಣ ಗುಲ್ವಾಡಿ ವೆಂಕಟರಾಯರು ಕೆ ಶಿವರಾಮ ಕಾರಂತರು ಸೇರಿದಂತೆ ಕಲೆ ಸಾಹಿತ್ಯ ಸಂಸ್ಕೃತಿ ಸಂಗೀತ ಕ್ಷೇತ್ರಗಳಿಗೆ ಈ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದರು ಅದಲ್ಲದೆ ಜ್ಞಾನಪೀಠ ಪ್ರಶಸ್ತಿಯು ಈ ಜಿಲ್ಲೆಯ ಕೋಟ ಶಿವರಾಮ ಕಾರಂತರಿಗೆ ಸಂದಿದೆ ಎಂದು ನುಡಿದರು
ವೇದಿಕೆಯಲ್ಲಿ ಉಡುಪಿ ಶಾಸಕ ಯಷ್ಪಾಲ್ ಸುವರ್ಣ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆಪರ ಜಿಲ್ಲಾಧಿಕಾರಿ ಮಮತಾದೇವಿ ಜಿಲ್ಲಾ ಪಂಚಾಯತ್ ಸಿ ಇ ಓ ಪ್ರಸನ್ನ ಜಿಲ್ಲಾ ಪೊಲೀಸ್ ಅಧಿಕಾರಿ ಡಾ ಅರುಣ್ ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀರಾವರಿ ಸುರೇಂದ್ರ ಅಡಿಗ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು ಉಡುಪಿ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 29 ಮಂದಿಗೆ ಹಾಗೂ ಐದು ಸಂಘ ಸಂಸ್ಥೆಗಳಿಗೆ ಸನ್ಮಾನಿಸಿ ಗೌರವಿಸಲಾಯಿತು