ಕೋಟ : ಇತ್ತೀಚಿಗೆ ಸಾಲಿಗ್ರಾಮ ಶ್ರಿಗುರುನರಸಿಂಹ ದೇಗುಲದ ಕೂಟ ಬಂಧು ಭವನದಲ್ಲಿ ಕೂಟ ಮಹಾಜಗತ್ತಿನ ಕೇಂದ್ರ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಇತ್ತೀಚಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜಸೇವಕ ಕೆ.ತಾರಾನಾಥ್ ಹೊಳ್ಳ ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿದರು. ಸಮಾರಂಭದಲ್ಲಿ ದೇಗುಲದ ಮಾಜಿ ಅಧ್ಯಕ್ಷ ಜಗದೀಶ ಕಾರಂತ, ಕೂಟ ಮಹಾಜಗತ್ತಿನ ಕೇಂದ್ರ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುರೇಶ ತುಂಗ, ಉಪಾಧ್ಯಕ್ಷರಾದ ಚಂದ್ರಶೇಖರ ಐತಾಳ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಸದಾಶಿವ ಐತಾಳ ಕೂಟ,ಮಹಾಜಗತ್ತಿನ ಕೇಂದ್ರ ಸಂಸ್ಥೆಯ ಕೋಶಾಧಿಕಾರಿ ಗೋಪಾಲಕೃಷ್ಣ ಮಯ್ಯ ಹಾಗೂ ಜತೆಕಾರ್ಯದರ್ಶಿ ಕುಮಾರ್ ಹೊಳ್ಳ ಉಪಸ್ಥಿತರಿದ್ದರು