ಕುಂದಾಪುರ : 58 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕುಂದಾಪುರದ ರಾಮಕ್ಷತ್ರಿಯ ಯುವಕ ಮಂಡಳಿ ವತಿಯಿಂದ ಕುಂದಾಪುರ ನಗರದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಬೆಳಿಗ್ಗೆ ಶ್ರೀ ಗಣೇಶ ವಿಗ್ರಹವನ್ನು ಮೆರವಣಿಗೆ ಮೂಲಕ ತಂದು ಪ್ರತಿಷ್ಠಾಪನೆ ಮಾಡಲಾಯಿತು

ಪ್ರಾಣ ಪ್ರತಿಷ್ಠೆ, ಗಣಹೋಮ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನೆರವೇರಿದ್ದು ಅರ್ಚಕರ ನೇತೃತ್ವದಲ್ಲಿ ನಡೆದ ಗಣಹೋಮ ಕಾರ್ಯಕ್ರಮದಲ್ಲಿ ರಾಮಕ್ಷತ್ರಿಯ ಯುವಕ ಮಂಡಳಿಯ ಅಧ್ಯಕ್ಷರಾದ ಮಹೇಶ್ ಬೆಟ್ಟಿನ್ ದಂಪತಿ ಪಾಲ್ಗೋಂಡರು ಸಂಜೆ 6.00 ಕ್ಕೆ ಉಡುಪಿಯ ಬಿ. ನಾಗರಾಜ ಶೇಟ್ ಮತ್ತು ಬಳಗದವರಿಂದ ಭಕ್ತಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು
ಇಂದು ಬೆಳಿಗ್ಗೆ 11.00 ಗಂಟೆಗೆ ಗಣಹೋಮ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದ್ದು ಸಂಜೆ 6.00 ಕ್ಕೆ ಸಭಾ ಕಾರ್ಯಕ್ರಮ ಜರುಗಲಿದೆ ದಿನೇಶ್ ಪ್ರಿಂಟರ್ಸ್ ಬೆಂಗಳೂರು ಇದರ ಮಾಲಕರಾದ ದಿನೇಶ್ ಕುಂದಾಪುರ ರವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಸಭಾಧ್ಯಕ್ಷತೆಯನ್ನು ರಾಮಕ್ಷತ್ರಿಯರ ಸಂಘದ ಅಧ್ಯಕ್ಷರಾದ ಡಿ.ಕೆ. ಪ್ರಭಾಕರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ರಾಜೇಂದ್ರ, ಯುನೈಟೆಡ್ ಏರ್‌ಲೈನ್ಸ್ನ ಶ್ರೀವತ್ಸ ಮದ್ದೋಡಿ ಹಾಗೂ ಮಂಗಳೂರು ಫಾಧರ್ ಮುಲ್ಲರ್ಸ್ ಮೆಡಿಕಲ್ ಕಾಲೇಜಿನ ಪ್ರೋ. ಡಾ. ಶುಭಾ ನಾರಾಯಣ ರಾವ್ ಆಗಮಿಸಲಿದ್ದು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕೋಟೇಶ್ವರ ವಿಘ್ನೇಶ್ವರ ಪ್ಲಾಸ್ಟಿಕ್ ಇಂಡಸ್ಟ್ರೀಸ್ ನವರ ಪ್ರಾಯೋಜಕತ್ವದ “ನೃತ್ಯ ವೈಭವ” ನಡೆಯಲಿದೆ

