ಉಡುಪಿ : ಸೋಮವಾರ ಬೆಳಗ್ಗಿನ ಜಾವ ಬಾರ್ ಮಾಲೀಕ ರಮಾನಂದ ಶೆಟ್ಟಿ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ರಮಾನಂದ ಶೆಟ್ಟಿ ಸಾವನ್ನಪ್ಪಿ ಅವರ ಪತ್ನಿ ಅಶ್ವಿನಿ ಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಶ್ವಿನಿ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ
ಅಶ್ವಿನಿ ಶೆಟ್ಟಿ ಅವರು ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು
ಅವರು Ballal’s Caboose ಅನ್ನೋ ಯೂಟ್ಯೂಬ್ ಚಾನೆಲ್ ಮೂಲಕ ತುಳುನಾಡಿನ ಆಚಾರ-ವಿಚಾರಗಳನ್ನು ಬಿಂಬಿಸುವ ವೀಡಿಯೋಗಳನ್ನು ಮಾಡಿ ಸಾಕಷ್ಟು ಉತ್ತಮ ಹೆಸರು ಗಳಿಸಿದ್ದರು.