Home » ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನಾಕೋಶ್ರಕ್ಕೆ ಬಲಿಯಾಗಲಿದೆ- ರಮೇಶ್ ಕಾಂಚನ್
 

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನಾಕೋಶ್ರಕ್ಕೆ ಬಲಿಯಾಗಲಿದೆ- ರಮೇಶ್ ಕಾಂಚನ್

by Kundapur Xpress
Spread the love

ಉಡುಪಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಗಳನ್ನು ಹಂತ ಹಂತವಾಗಿ ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರ ಮೇಲೆ ಆರ್ಥಿಕ ಹೊರೆ ಹೊರಿಸುತ್ತಿದ್ದು, ಈ ನೀತಿಯ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ.

ಅಧಿಕಾರಕ್ಕೆ ಬರುವ ಮುನ್ನ ‘ಅಚ್ಚೇ ದಿನ್’ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಬಳಿಕ ನಿರಂತರ ಬೆಲೆ ಏರಿಕೆಯ ಮೂಲಕ ಜನರ ನಿರೀಕ್ಷೆಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದು ಟೀಕಿಸಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ, ವಿವಿಧ ಕಾರಣಗಳನ್ನು ಮುಂದಿಟ್ಟು ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ದರಗಳನ್ನು ಹೆಚ್ಚಿಸಲಾಗುತ್ತಿದೆ. ಇದರಿಂದ ಸಾಮಾನ್ಯ ಜನರ ಬದುಕಿನ ವೆಚ್ಚ ಹೆಚ್ಚುತ್ತಿದ್ದು, ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಜನರಿಗೆ ‘ಸ್ಲೋ ಪಾಯ್ಸನ್’ ನೀಡುವಂತಿದ್ದು, ಸಣ್ಣ ಪ್ರಮಾಣದಲ್ಲಿ ನಿರಂತರವಾಗಿ ಬೆಲೆ ಹೆಚ್ಚಿಸುವ ಮೂಲಕ ಜನರ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿರುವ ರಮೇಶ್ ಕಾಂಚನ್, ಈ ಬೆಳವಣಿಗೆಗಳ ಬಗ್ಗೆ ಜನರಲ್ಲಿ ಅಸಮಾಧಾನ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಜನಾಕ್ರೋಶಕ್ಕೆ ಗುರಿಯಾಗಲಿದೆ ಎಂದು ಗುಡುಗಿದ್ದಾರೆ.

 

Related Articles

error: Content is protected !!