Home » ಮರು ತನಿಖೆಗೆ ಆದೇಶ
 

ಮರು ತನಿಖೆಗೆ ಆದೇಶ

by Kundapur Xpress
Spread the love

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣ ಸಂಬಂಧ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದ್ದು ಮರು ತನಿಖೆ ನಡೆಸುವಂತೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಲೋಕಾಯುಕ್ತಕ್ಕೆ ಆದೇಶ ನೀಡಿದ್ದಾರೆ.

2013- 18ರ ಸರ್ಕಾರದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಕಿಂಗ್ಸ್ ಕೋರ್ಟ್‌ನ ಎಲ್. ವಿವೇಕ್ ಎಂಬವರಿಂದ 1.30 ಕೋಟಿ ರೂಪಾಯಿ ಹಣ ಪಡೆದ ಆರೋಪ ಕೇಳಿ ಬಂದಿತ್ತು. ಬಳಿಕ ವಿದೇಕ್ ಅವರನ್ನು 2014ರಲ್ಲಿ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ನೇಮಕ ಮಾಡಲಾಗಿತ್ತು ಎಂಬ ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ ಲೋಕಾಯುಕ್ತಕ್ಕೆ ಬಿಜೆಪಿ ನಾಯಕ ಎನ್. ಆರ್. ರಮೇಶ್ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆದು ಸಿದ್ದರಾಮಯ್ಯ ವಿರುದ್ದ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಬಿ ರಿಪೋರ್ಟ್‌ನಲ್ಲಿ ಹೇಳಲಾಗಿತ್ತು.

ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ವಿರೋಧಿಸಿದ್ದ ಎನ್. ಆರ್.ರಮೇಶ್ ಅವರ ವಕೀಲರು, ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಪೂರಕ ದಾಖಲೆಗಳನ್ನು ನ್ಯಾಯಾಲಯಕ್ಕೆ ಒದಗಿಸಿದ್ದರು. ಇದರ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ, ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ರದ್ದು ಮಾಡಿ ಕೂಡಲೇ ತನಿಖೆ ನಡೆಸಿ ಅಂತಿಮ ವರದಿಯನ್ನು ಆರು ತಿಂಗಳೊಳಗಾಗಿ ನೀಡುವಂತೆ ಆದೇಶಿಸಿದೆ

   

Related Articles

error: Content is protected !!