ಕೋಟೇಶ್ವರ : ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ ಈ ವರ್ಷದ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇವರು ಜನರಿಂದ ಜನರ ರಕ್ಷಣೆಗಾಗಿ ರೆಡ್ ಕ್ರಾಸ್ ಸಂಸ್ಥೆಯ ಉಗಮವಾಗಿದೆ ಆದ್ದರಿಂದ ಎಲ್ಲ ಪ್ರೌಢಶಾಲೆ ಗಳಲ್ಲಿ ರೆಡ್‌ಕ್ರಾಸ್ ಘಟಕ ಆರಂಭವಾಗಬೇಕಿದೆ ಎಂದು ಅಭಿಪ್ರಾಯ ಪಟ್ಟರು
ರೆಡ್ ಕ್ರಾಸ್ ಸೊಸೈಟಿಯ ಸಂಚಾಲಕರಾದ ದಿನಕರ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳಿಗೆ ಜೀವ ಉಳಿಸುವ ಕೆಲಸಗಳಾದ ಪ್ರಥಮ ಚಿಕಿತ್ಸೆ ಪ್ರಕೃತಿ ವಿಕೋಪ ನಿರ್ವಹಣೆಯ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳು ತಮ್ಮನ್ನು ಹೆಚ್ಚು ಹೆಚ್ಚು ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ವಹಿಸಿದ್ದರು ಸಭೆಯಲ್ಲಿ ಕುಂದಾಪುರ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿಗಳಾದ ಶಿವರಾಂ ಶೆಟ್ಟಿ ಶಾಲಾ ರೆಡ್ ಕ್ರಾಸ್ ಕ್ಲಬ್ ನ ಅಧ್ಯಕ್ಷೆ ಸಿಂಚನ ಕಾರ್ಯದರ್ಶಿ ಶ್ರೇಯಸ್ ಉಪಸ್ಥಿತರಿದ್ದರು
ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಶುಚಿ ಪ್ಯಾಡ್ ಹಾಗೂ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು ಶಾಲಾ ರೆಡ್ ಕ್ರಾಸ್ ಘಟಕದ ಸಂಚಾಲಕ ಶ್ರೀಕಾಂತ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು