Home » ಜೀನೇವಾ ಒಪ್ಪಂದದ ದಿನಾಚರಣೆ
 

ಜೀನೇವಾ ಒಪ್ಪಂದದ ದಿನಾಚರಣೆ

by Kundapur Xpress
Spread the love

ಕುಂದಾಪುರ  : ಕುಂದಾಪುರ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಶಾಖೆ ಇವರ ನೇತೃತ್ವದಲ್ಲಿ ರೋಟರಿ ಲಕ್ಷ್ಮಿ ನರಸಿಂಹ ಕಲಾಮಂದಿರದ  ಜೂನಿಯರ್ ಕಾಲೇಜಿನ ಆವರಣದಲ್ಲಿ ಜೀನೇವಾ ಒಪ್ಪಂದದ ದಿನಾಚರಣೆಯನ್ನು  ಆಯೋಜಿಸಲಾಯಿತು.  ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಆಶ್ರಯದಲ್ಲಿ ಹಮ್ಮಿಕೊಂಡಿರುವ ಜಿನೀವ ಒಪ್ಪಂದದ ದಿನಾಚರಣೆಯು ತುಂಬಾ ಅರ್ಥಪೂರ್ಣವಾಗಿದೆ. ಯುದ್ಧದ ಸನ್ನಿವೇಶದಲ್ಲಿ ಸೈನಿಕರನ್ನು ಮತ್ತು ಜನರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬ ಬಗ್ಗೆ ಜಿನೇವಾ ಒಪ್ಪಂದದ ಹಲವು ಮಾರ್ಗ ಸೂಚಿಗಳನ್ನು ಒಳಗೊಂಡಿದೆ. ಯುದ್ಧದ ಸಂದರ್ಭದಲ್ಲಿ ಗಾಯಗೊಂಡ ಸೈನಿಕರಿಗೆ ಧರ್ಮ, ಬಣ್ಣ ,ಲಿಂಗ ಭೇದವಿಲ್ಲದೆ ಚಿಕಿತ್ಸೆ ನೀಡಬೇಕು ಹಾಗೂ ಯುದ್ಧದ ಸಂದರ್ಭದಲ್ಲಿ ಜನರು ಸರೆ ಸಿಕ್ಕರೆ ಅವರನ್ನು ಅಮಾನವೀಯವಾಗಿ ನಡೆಸಿಕೊಳ್ಳುವಂತಿಲ್ಲ  ಎಂದು ಜಿನೀವಾ ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೂಡ್ಗಿಯವರು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾನ್ಯ ಕುಂದಾಪುರ ಅಸಿಸ್ಟೆಂಟ್ ಕಮಿಷನರ್, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು

   

Related Articles

error: Content is protected !!