ಕುಂದಾಪುರ : ಕೇಂದ್ರ ಸರಕಾರದ ಮಹತ್ವ ಜನಪರ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಸಹ ಯೋಜನೆಯಡಿ ಮೀನುಗಾರರ ನೊಂದಾವಣಿ ಶಿಬಿರಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿದರು
ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಮೀನು ಕೃಷಿಕರು ಮತ್ತು ಮೀನುಗಾರರ ಆದಾಯವನ್ನು ದ್ವಿಗುಣಗೊಳಿಸುವ ಗುರಿಯೊಂದಿಗೆ ಪ್ರಾರಂಭಿಸಲಾಯಿತು. ಇದು ಭಾರತದ ಮೀನುಗಾರಿಕೆ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಇದು ಆತ್ಮನಿರ್ಭರ್ ಭಾರತ್ ಯೋಜನೆಯ ಭಾಗವಾಗಿದೆ
ಈ ಸಂದರ್ಭದಲ್ಲಿ ಬೀಜಾಡಿ ಮೀನುಗಾರರ ಸಹಕಾರಿ ಸಂಘ ಅಧ್ಯಕ್ಷ ಬಿ ಮಂಜುನಾಥ್ ಚಾತ್ರಬೆಟ್ಟು, ಹಾಗೂ ಇಲಾಖೆ ಇಲಾಖೆಯ ನಿರ್ದೇಶಕರು ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ವರ್ಗ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.