Home » ಹಾಡಿಕೆರೆ ಚಂದ್ರ ನಾಯ್ಕ್ ರೈತ ಪುರಸ್ಕಾರ
 

ಹಾಡಿಕೆರೆ ಚಂದ್ರ ನಾಯ್ಕ್ ರೈತ ಪುರಸ್ಕಾರ

by Kundapur Xpress
Spread the love

ಕೋಟ : ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ ಈ ನಿಟ್ಟಿನಲ್ಲಿ ಪಂಚವರ್ಣದ ರೈತರೆಡೆಗೆ ಕಾರ್ಯಕ್ರಮ ಪ್ರಶಂಸನಾರ್ಹ ಕಾರ್ಯವಾಗಿದೆ ಎಂದು ಕೋಟದ ಹಾಡಿಕೆರೆ ಶಾಂತಮೂರ್ತಿ ಶ್ರೀ ಶನೀಶ್ವರ ದೇಗುಲದ ಧರ್ಮದರ್ಶಿ ಭಾಸ್ಕರ್ ಸ್ವಾಮಿ ಅಭಿಪ್ರಾಯಪಟ್ಟರು.

ಭಾನುವಾರ ಕೋಟದ ಹಾಡಿಕೆರೆಬೆಟ್ಟು ಇಲ್ಲಿ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ,ಗೆಳೆಯರ ಬಳಗ ಕಾರ್ಕಡ,ರೈತಧ್ವನಿ ಸಂಘ ಕೋಟ,ಜೆಸಿಐ ಸಿನಿಯರ್ ಲಿಜನ್ ಕೋಟ,ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 39ನೇ ಮಾಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಮನೆ ಮನೆಗೆ ತೆರಳಿ ರೈತರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಜಿಲ್ಲಾ ಎಲ್ಲಾ ಭಾಗಗಳ ಸಂಘಸಂಸ್ಥೆಗಳಿಂದಾಗಲಿ ಆಗ ಮಾತ್ರ ಕೃಷಿ ಕಾಯಕದ ಕಡೆ ಹೆಚ್ಚು ಆಕರ್ಷಿತರಾಗುತ್ತಾರೆ.ಪ್ರಸ್ತುತ ಯುವ ಸಮೂಹ ಕೃಷಿ ಕಾರ್ಯದತ್ತ ಮುನ್ನಗ್ಗಬೇಕಿದೆ ಹಾಡಿಕೆರೆ ಚಂದ್ರ ನಾಯ್ಕ್ ರಂತೆ ಪ್ರತಿಯೊಬ್ಬರು ಕೃಷಿ ಕ್ಷೇತ್ರದಲ್ಲಿ ಸಾಧಕರಾಗಲು ಸಾಧ್ಯವಿದೆ ಅವರನ್ನೆ ಪ್ರೇರಣೆಯಾಗಿ ಪಡೆಯಿರಿ ಎಂದು ಆಶಿಸಿದರು.ಕಾರ್ಯಕ್ರಮಕ್ಕೂ ಮೊದಲು ಗೋ ಪೂಜೆಯನ್ನು ಕೃಷಿ ಸಾಧಕ ಪುರಸ್ಕೃತ ಚಂದ್ರ ಹಾಡಿಕೆರೆ ದಂಪತಿಗಳು ನೆರವೆರಿಸಿ ತನ್ನದೆ ತೋಟದಲ್ಲಿ ಗಿಡ ನೆಟ್ಟು,ಪಂಚವರ್ಣ ಸಾಧಕ ರೈತ ಪುರಸ್ಕಾರ ಸ್ವೀಕರಿಸಿದರು.ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ,ಸದಸ್ಯ ಅಜಿತ್ ದೇವಾಡಿಗ,ಉದ್ಯಮಿ ಹರೀಶ್ ದೇವಾಡಿಗ,ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ ಜಯರಾಮ್ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಸದಸ್ಯ ಶೇಖರ್ ಕಾರ್ಕಡ,ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಅಧ್ಯಕ್ಷೆ ವನೀತಾ ಮಂಜುನಾಥ್ ಉಪಾಧ್ಯಾ,ಪಂಚವರ್ಣ ಸಂಸ್ಥೆಯ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಜೆಸಿಐ ಸಿನಿಯರ್ ಲಿಜನ್ ಕೋಟ ಅಧ್ಯಕ್ಷ ಕೇಶವ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು.ಸಂಚಾಲಕಿ ಸುಜಾತ ಬಾಯರಿ ಪ್ರಾಸ್ತಾವನೆ ಸಲ್ಲಿಸಿದರು.ಪರಸ್ಕಾರ ಪತ್ರವಮನ್ನು ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ವಾಚಿಸಿದರು.ಕಾರ್ಯಕ್ರಮವನ್ನು ಶಿಕ್ಷಕ ಸಂತೋಷ್ ಕುಮಾರ್ ಕೋಟ ನಿರೂಪಿಸಿದರು.ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.

   

Related Articles

error: Content is protected !!