ಬೆಂಗಳೂರು : ದೇಶದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರನ್ ಅವರು ಇಂದು ಭಾರತಕ್ಕೆ ಆಗಮಿಸಲಿದ್ದಾರೆ.
ಪ್ರಧಾನಿ ಮೋದಿ ಅವರು 2023ರಲ್ಲಿ ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸ್ನೇಹದ ಸಂಕೇತವಾಗಿ, ಪರಸ್ಪರ ಸಹಕಾರ ತತ್ವದಡಿ ಮ್ಯಾಕ್ರನ್ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.
ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯದ 25ನೇ ವರ್ಷಾಚರಣೆ ಸಮಯದಲ್ಲಿ ಫ್ರಾನ್ಸ್ ಅಧ್ಯಕ್ಷರು ಭಾರತ ಪ್ರವಾಸ ಭೇಟಿ ಎರಡು ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಕಾರ್ಯತಂತ್ರ ರೂಪಿಸುವ ಸಾಧ್ಯತೆಗಳಿವೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಮೋದಿ ಹಾಗೂ ಮ್ಯಾಕ್ರನ್ ವಿಶ್ವದ ನಾನಾ ವೇದಿಕೆಗಳಲ್ಲಿ ಪರಸ್ಪರ ಆರು ಬಾರಿ ಭೇಟಿಯಾಗಿದ್ದಾರೆ