ಕುಂದಾಪುರ : ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಅರುಣ್ ಪ್ರತಿಕ್ರಿಯಿಸಿ, ಸಂತ್ರಸ್ತರು ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸುಪ್ರೀಂ ಕೋರ್ಟ್ ನಿಯಮದನ್ವರ ದೂರನ್ನು ವೈದ್ಯಕೀಯ ಮಂಡಳಿಗೆ ವರ್ಗಾಯಿಸಿ ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದರು.ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಆರೋಗ್ಯ ಇಲಾಖೆ ವಿಭಾಗೀಯ ಜಂಟಿ ನಿರ್ದೇಶಕಿ ಡಾ. ರಾಜೇಶ್ವರಿ, ಜಿ.ಪಂ ಸಿಇಓ ಪ್ರಸನ್ನ ಕುಮಾರ್, ತಹಸೀಲ್ದಾರ್ ಶೋಭಾ ಲಕ್ಷ್ಮೀ ಎಚ್.ಎಸ್, ಟಿಎಚ್‍ಒ ಪ್ರೇಮಾನಂದ, ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ರಾಬರ್ಟ್ ರೊಬೆಲ್ಲೋ, ಡಿವೈಎಸ್ಪಿ ಬೆಳ್ಳಿಯಪ್ಪ, ಕುಂದಾಪುರ ನಗರ ಠಾಣಾ ನಿರೀಕ್ಷಕ ನಂದ ಕುಮಾರ್ ಇದ್ದರು.
ಯಶವಂತ ಗಂಗೊಳ್ಳಿ ಆಗ್ರಹ
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಯಶವಂತ ಗಂಗೊಳ್ಳಿ, ಕರುಳಬಳ್ಳಿ ಸುತ್ತಿಕೊಂಡು ಮಗು ಸಾವನ್ನಪ್ಪಿದೆ ಎಂದು ವೈದ್ಯರು ಹೇಳುತ್ತಿದ್ದಾರೆ. ನಾವು ಪ್ರಕರಣ ದಾಖಲಿಸುತ್ತೇವೆ ಎಂದರೆ ಮುಂದೆ ನಿಮಗೆ ತೊಂದರೆಯಾಗುತ್ತದೆ ಎಂದು ನಮ್ಮನ್ನು ಬೆದರಿಸುವ ಪ್ರಯತ್ನ ನಡೆಸಿದ್ದಾರೆ. ಹಿಂದೆಯೂ ಅನೇಕ ಪ್ರಕರಣಗಳಾದಾಗ ಅವರನ್ನು ಬೆದರಿಸಿ ಪ್ರಕರಣ ದಾಖಲಾಗದಂತೆ ನೋಡಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಹಿಂದೆಯೂ ಈ ರೀತಿಯ ಪ್ರಕರಗಳು ನಡೆದಾಗ ನ್ಯಾಯ ಸಿಕ್ಕಿಲ್ಲ. ಜಿಲ್ಲಾಧಿಕಾರಿ, ಎಸ್ಪಿ, ಡಿಎಚ್‍ಓ ಭರವಸೆ ಕೊಟ್ಟಿದ್ದಾರೆ. ಹೀಗಾಗಿ ಒಂದು ವಾರದ ಮಟ್ಟಿಗೆ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದೇವೆ. ಮಾತು ಉಳಿಸಿಕೊಂಡಿಲ್ಲ ಎಂದರೆ ಮತ್ತೆ ಹೋರಾಟ ಕೈಗೆತ್ತಿಕೊಳ್ಳುತ್ತೇವೆ. ಒಂದು ವರ್ಷದಲ್ಲಿ ಹೀಗೆಯೇ ಬೆಳಕಿಗೆ ಬಾರದ ಸಾಕಷ್ಟು ಪ್ರಕರಣಗಳಿವೆ. ಅವೆಲ್ಲವನ್ನೂ ತನಿಖೆ ನಡೆಸಿ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.