ಬೆಂಗಳೂರು : ಬಿಜೆಪಿಗೆ ಸೇರಿಸಿಕೊಳ್ಳುವಾಗ ಜಾಮೂನು, ಮೈಸೂರು ಪಾಕ್, ಜಿಲೇಬಿ ಕೊಡುತ್ತಾರೆ. ಅವರ ಕೆಲಸ ಮುಗಿದ ಮೇಲೆ ವಿಷ ಕೊಡುತ್ತಾರೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾ ವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುತ್ತೇನೆಂದು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಘೋಷಿಸಿದರು.
ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಕೆಂಗೇರಿ ಉಪನ ಗರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸೋಮಶೇಖರ್, ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯ ಮಂತ್ರಿ, ಉಪ ಮುಖ್ಯಮಂತ್ರಿಗಳನ್ನು ರಾಜಾ ರೋಷವಾಗಿ ಭೇಟಿ ಮಾಡುತ್ತೇನೆ. ಆದರೆ, ಬಿಜೆಪಿಯ ಹಲವು ನಾಯಕರು ಕದ್ದುಮುಚ್ಚಿ ರಾತ್ರಿ ವೇಳೆ ಸಿಎಂ, ಡಿಸಿಎಂ ಭೇಟಿ ಮಾಡಿ ಚರ್ಚಿಸುತ್ತಾರೆ. ಆದರೆ, ನನ್ನ ಭೇಟಿ ಬಗ್ಗೆ `ದೊಡ್ಡದಾಗಿ ಚರ್ಚಿಸುತ್ತಾರೆ ಎಂದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಯಾರಿಗೂ ಉಚಿತವಾಗಿ ಸಿಗುವುದಿಲ್ಲ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜನ ಗೋ ಬ್ಯಾಕ್ ಎಂದು ಹೇಳಿ ತಿರಸ್ಕರಿಸಿದವರನ್ನು ಬಿಜೆಪಿ ಇಲ್ಲಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಬೇಕೆಂಬ ಉದ್ದೇಶದಿಂದ ಕೆಲಸ ಮಾಡಿದ ಬಿಜೆಪಿ ಮುಖಂಡರು ಈಗ ಜೆಡಿಎಸ್ ಜತೆಗೆ ಶಾಮೀ ಲಾಗಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯನ್ನು ಜವರಾಯಿ ಗೌಡರ ಕಾಲಿಗೆ ಬೀಳಿಸಿ, ಈ ಉಡಿ ತುಂಬಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶೋಭಾ ಈ ಕರಂದ್ಲಾಜೆ ಅವರಿಗೆ ನನ್ನ ವಿರುದ್ಧ ಸೋತವರ ಭೇಟಿ ಗೆ ಸಮಯವಿದೆ. ಆದರೆ, ಕ್ಷೇತ್ರದ ಶಾಸಕನಾದ ನನ್ನನ್ನು ಭೇಟಿಯಾಗುವ ಕನಿಷ್ಠ ಸೌಜನ್ಯವೂ ಇಲ್ಲ. ಅಂಥವರಿಗೆ ನಾನು ಸಹಕಾರ ನೀಡಬೇಕಾ ಎಂದು ಕಿಡಿಕಾರಿದರು.