ಕುಂದಾಪುರ : ಕುಂದಾಪುರ ತಾಲೋಕಿನ ಬಿದ್ಕಲ್ ಕಟ್ಟೆ ಕೆ ಪಿ ಎಸ್ ಶಾಲೆ ಸಭಾಭವನದಲ್ಲಿ ಅ. 31 ಹಾಗೂ ಸೆ, 1 ರಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ಘಟಕ ಅಧ್ಯಕ್ಷ ಡಾ। ಉಮೇಶ್ ಪುತ್ರನ್ ತಿಳಿಸಿದ್ದಾರೆ
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿ, ಅ. 31ರ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸೆ. 1ರಂದು ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ಉದ್ಘಾಟನೆ, ಗೋಷ್ಠಿಗಳು, ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು ಕುಂದಾಪುರ ಕನ್ನಡ ಭಾಷೆ, ಸಂಸ್ಕೃತಿಗೆ ಒತ್ತು ನೀಡಲು ಉದ್ದೇಶಿಸಲಾಗಿದೆ. ಭೌಗೋಳಿಕವಾಗಿಯೂ ಎಲ್ಲೆಡೆಗೆ ಪ್ರಾತಿನಿಧ್ಯ ನೀಡಲಾಗುವುದು ಎಂದರು.
ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಟೀಲು ಪದವಿ ಕಾಲೇಜಿನ ನಿವೃತ್ತ ಪ್ರಾಚಾರ್ಯ, ಮಂಗಳೂರು ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಪ್ರೊ| ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಕಳೆದ ವರ್ಷ ಜಿಲ್ಲೆಯಲ್ಲಿ 4 ತಾಲೂಕು ಸಮ್ಮೇಳನಗಳಾಗಿದ್ದು ಸರಕಾರದಿಂದ ಕಳೆದ ವರ್ಷದಿಂದ ತಾಲೂಕು ಸಮ್ಮೇಳನಗಳಿಗೆ ಅನುದಾನ ಬರುತ್ತಿಲ್ಲ ಎಂದರು.
ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎಂ. ಮಹೇಶ ಹೆಗ್ಡೆ ಮೊಳಹಳ್ಳಿ ಕನ್ನಡ ಮಾಧ್ಯಮದಲ್ಲಿ ಶೇ.100 ಫಲಿತಾಂಶ ಬಂದ ಶಾಲೆಗಳಿಗೆ ಗೌರವಾರ್ಪಣೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸಮ್ಮಾನ ನಡೆಯಲಿದೆ ಎಂದು ತಿಳಿಸಿದರು