Home » ಮಕ್ಕಳ ಸಾಹಿತ್ಯ ಸಮ್ಮೇಳನ ಹೊಸ ಮನ್ವಂತರ
 

ಮಕ್ಕಳ ಸಾಹಿತ್ಯ ಸಮ್ಮೇಳನ ಹೊಸ ಮನ್ವಂತರ

-ಸಮ್ಮೇಳನಾಧ್ಯಕ್ಷೆ ಮನ್ವಿತ ಅನಿಸಿಕೆ

by Kundapur Xpress
Spread the love

 

ಕೋಟ : ಮೊಬೈಲ್ ದಾಸ್ಯದಿಂದ ಹೊರ ಬಂದು ಸಾಹಿತ್ಯದ ಬದುಕಿನತ್ತ ನಮ್ಮ ಜೀವನವನ್ನು ಅಳವಡಿಸಿಕೊಳ್ಳಬೇಕು. ಕನ್ನಡದಲ್ಲಿ ಓದುವುದು, ಬರೆಯುವುದು ನಮ್ಮ ಮೂಲ ಮಂತ್ರವಾಗಬೇಕು. ಅಧ್ಯಯನಕ್ಕೆ ಇಂಗ್ಲೀಷ್ ಬಳಸಿ, ಒಟನಾಟಕ್ಕೆ ಕನ್ನಡವನ್ನು ಬಳಸಿ ಎಂದು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಮನ್ವಿತ ವಿದ್ಯಾರ್ಥಿಗಳಿಗೆ ಕರೆ ನೀಡಿದರಲ್ಲದೆ ಪರಿಸರದ ಬಗ್ಗೆ ಕಾಳಜಿ ವಹಿಸಿ ಇಲ್ಲದಿದ್ದರೆ ಮನುಕುಲಕ್ಕೆ ಸಮಸ್ಯೆ ತಪ್ಪಿದಲ್ಲ ಎಂದು ಸಾಹಿತ್ಯ ಸಮ್ಮೇಳನದಲ್ಲಿ ಅವರು ಅಭಿಪ್ರಾಯಪಟ್ಟರು.

ಕೋಟ ವಿವೇಕ ಬಾಲಕಿರ ಪ್ರೌಢಶಾಲೆಯ ಸ್ವರ್ಣಭವನದಲ್ಲಿ ಸೋಮವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸಾಲಿಗ್ರಾಮದ ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ, ಕೋಟ ವಿವೇಕ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಸಹಕಾರದಲ್ಲಿ ನಡೆದ ಹತ್ತನೆಯ ಉಡುಪಿ ಜಿಲ್ಲಾ ಮಕ್ಕಳ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿನಿ ರಿಷಿಕಾ ಸಮ್ಮೇಳನಕ್ಕೆ ಚಾಲನೆ ನೀಡಿ ಕನ್ನಡವನ್ನು ಪ್ರೀತಿಸುವ ಗುಣವನ್ನು ನಾವು ಬೆಳೆಸಿಕೊಂಡು ಕನ್ನಡ ಸಾಹಿತ್ಯವನ್ನು ಓದುವ, ಬರೆಯುವತ್ತ ಚಿತ್ತವನ್ನು ಕೇಂದ್ರೀಕರಿಸಿ ಮುಂದಿನ ಪೀಳಿಗೆಯಲ್ಲಿ ಸಾಹಿತ್ಯದ ಒಲವನ್ನು ಮೂಡಿಸಿ ಎಂದು ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸುವಂತೆ ನಮ್ಮ ಪೋಷಕರು ಮತ್ತು ಶಿಕ್ಷಕರು ಪ್ರೇರೇಪಿಸಿದಲ್ಲಿ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡುತ್ತದೆ ಎಂದು ಅವರು ಹೇಳಿದರು. ಉಡುಪಿ ಜಿಲ್ಲಾ ಕ.ಸಾ.ಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿ ಆಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಕೋಟ ಪಿಯು ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ ನಾವಡ, ಸಾಲಿಗ್ರಾಮ ಮಕ್ಕಳ ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ಡಾ.ನಿ.ಬೀ.ವಿಜಯ ಬಲ್ಲಾಳ, ವಿವೇಕ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಪ್ರೀತಿ ರೇಖಾ ಶುಭ ಹಾರೈಸಿದರು.

ಕವಿಗೋಷ್ಟಿ ಅಧ್ಯಕ್ಷೆ ಗುಂಡ್ಮಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಂದಿತಾ, ಕಥಾಗೋಷ್ಠಿಯ ಅಧ್ಯಕ್ಷೆ ಸಿದ್ದಾಪುರ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿನಿ ವಿಧಾತ್ರಿ ರವಿಶಂಕರ್, ಕಾರ್ಯಕ್ರಮದ ರೂವಾರಿಗಳಾದ ಪ್ರೊ.ಚಿತ್ರಪಾಡಿ ಉಪೇಂದ್ರ ಸೋಮಯಾಜಿ, ನಿವೃತ್ತ ಶಿಕ್ಷಕ ಪಾರಂಪಳ್ಳಿ ನರಸಿಂಹ ಐತಾಳ,ಮಕ್ಕಳ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷ ನರೇಂದ್ರ ಕುಮಾರ ಕೋಟ ಇದ್ದರು.

ಮಕ್ಕಳ ಸಾಹಿತ್ಯ ವೇದಿಕೆಯ ಸಂಚಾಲಕ ಜಿ.ರಾಮಚಂದ್ರ ಐತಾಳ ಸ್ವಾಗತಿಸಿದರು. ಹಟ್ಟಿಯಂಗಡಿ ಸಿದ್ದಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿ ವಿಖ್ಯಾತ ವಂದಿಸಿದರು. ಕೋಟ ವಿವೇಕ ಬಾಲಕಿರ ಪ್ರೌಢಶಾಲೆಯ ವಿದ್ಯಾರ್ಥಿನಿ ರಮ್ಯ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನ ವಿವೇಕ ಪಿಯು ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಧ್ವಜಾರೋಹಣ ಮಾಡಿದರು. ಕೋಟ ವಿದ್ಯಾ ಸಂಘದ ಜತೆ ಕಾರ್ಯದರ್ಶಿ ಮಂಜುನಾಥ ಉಪಾಧ್ಯ ಮೆರವಣಿಗೆಗೆ ಚಾಲನೆ ನೀಡಿದರು

 

Related Articles

error: Content is protected !!