ಕಾಪು : ಉಡುಪಿ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದ ಬಲವರ್ಧನೆಗಾಗಿ ಕಾರ್ಯ ಯೋಜನೆಗಳ ಅನುಷ್ಠಾನಕ್ಕೆ ಸರಕಾರದ ಗಮನ ಸೆಳೆಯಲು ಕಾಪು ಕ್ಷೇತ್ರದ ನೂತನ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಯವರಿಗೆ ಉಡುಪಿ ಜಿಲ್ಲಾ ಸಹಕಾರ ಭಾರತಿ ವತಿಯಿಂದ ಮನವಿ ಸಲ್ಲಿಸಲಾಯಿತು
ಉಡುಪಿ ಜಿಲ್ಲಾ ಕೇಂದ್ರದಲ್ಲಿ “ಜಿಲ್ಲಾ ಸಹಕಾರಿ ಭವನ “ನಿರ್ಮಾಣ ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ರಚನೆ ಹಾಗೂ ಉಡುಪಿ ಜಿಲ್ಲೆಗೆ ಪ್ರತ್ಯೇಕ “ಸಹಕಾರಿ ನ್ಯಾಯಾಲಯ” ಸ್ಥಾಪನೆಯ ಬಗ್ಗೆ ಮನವಿ ಸಲ್ಲಿಸಲಾಯಿತು ಸಂದರ್ಭದಲ್ಲಿ ಸಹಕಾರ ಭಾರತಿ ಉಡುಪಿ ಜಿಲ್ಲಾಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಹಾಗೂ ಸಹಕಾರ ಭಾರತಿ ರಾಜ್ಯ ಸಂಚಾಲಕ ನರಸಿಂಹ ಕಾಮತ್ ಸಾಣೂರು ಮುಂತಾದವರು ಉಪಸ್ಥಿತರಿದ್ದರು