Home » 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ
 

70ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ

by Kundapur Xpress
Spread the love

ಪಡುಬಿದ್ರಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ, ಉಡುಪಿ. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ) ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪಡುಬಿದ್ರಿ ಸಹಕಾರ ಸಂಗಮ ವೈ ಲಕ್ಷ್ಮಣ ಸಭಾಂಗಣದಲ್ಲಿ ಆಯೋಜಿಸಲಾದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ” ಸಮಾರೋಪ ಹಾಗೂ ಸಹಕಾರ ಶಿಕ್ಷಣ, ತರಬೇತಿಯ ಪರಿಷ್ಕರಣೆ ದಿನ, ಸೊಸೈಟಿಯ ನವೀಕೃತ ಹವಾನಿಯಂತ್ರಿತ ಸಭಾಂಗಣ ಉದ್ಘಾಟನೆ, ಸನ್ಮಾನ, ಕೃಷಿ ಸಹಾಯಧನ ವಿತರಣಾ ಸಮಾರಂಭ ನಡೆಯಿತು

ಸಮಾರಂಭವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಮಾತನಾಡಿ ಸಹಕಾರಿ ವ್ಯವಸ್ಥೆಯಲ್ಲಿ ಕಟ್ಟ ಕಡೆಯ ರೈತರನ್ನು ತಲುಪುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ ವಾಣಿಜ್ಯ ಬ್ಯಾಂಕ್ ಸಂಕುಚಿತಗೊಳ್ಳುತ್ತಿದೆ ಸಹಕಾರಿ ಕ್ಷೇತ್ರವು ವಿಕಾಸನಗೊಳ್ಳುತ್ತಿದೆ ಈ ಮೂಲಕ ಸಹಕಾರ ವ್ಯವಸ್ಥೆಯು ಬಲಾಢ್ಯವಾಗಿದ್ದು ರೈತರು ಸದಸ್ಯರು ಆರ್ಥಿಕವಾಗಿ ಬಲಾಡ್ಯರಾಗುತ್ತಿದ್ದಾರೆ ಶೇಕಡ 100 ಕೃಷಿ ಸಾಲ ಮರುಪಾವತಿಯಿಂದ ಸಹಕಾರಿ ಕ್ಷೇತ್ರಕ್ಕೆ ಉಡುಪಿ ದಕ್ಷಿಣ ಕನ್ನಡ ಜಿಲ್ಲೆ ಮಾದರಿಯಾಗಿದೆ ಅಂತಹ ಸಹಕಾರಿ ಕ್ಷೇತ್ರದಲ್ಲಿ ನಾವೆಲ್ಲರೂ ವ್ಯವಹಾರವನ್ನು ಮಾಡೋಣ ಎಂದರು

ಕಾಪು ಶಾಸಕರಾದ ಗುರ್ಮೆ ಸುರೇಶ್‌ ಶೆಟ್ಟಿಯವರು ನವೀಕೃತ ಹವಾ ನಿಯಂತ್ರಿತ ಸಭಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ) ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಮತ್ತು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,ಮಂಗಳೂರು ಇದರ ಅಧ್ಯಕ್ಷರಾದ ಡಾ। ಎಮ್. ಎನ್. ರಾಜೇಂದ್ರ ಕುಮಾರ್, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಸಹಕಾರಿ ಯೂನಿಯನ್ ನಿ. ಅಧ್ಯಕ್ಷರಾದ ಜಯಕಯ್ ಶೆಟ್ಟಿ ಇಂದ್ರಾಳಿ, ಬೆಳಪು ಸರಕಾರಿ ಮಹಾಮಂಲದ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ವೈ, ಕುಂದಾಪುರ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ, ನಿವೃತ್ತ ಪ್ರಾಂಶುಪಾಲರು, ಜಾನಪದ ವಿದ್ವಾಂಸರಾದ ಗಣನಾಥ್ ಎಕ್ಕಾರ್, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ) ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಬಲ್ಲಾಳ್, ಗುರುರಾಜ್ ಪೂಜಾರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

   

Related Articles

error: Content is protected !!