Home » ಕುಂದಾಪ್ರ ಕನ್ನಡ 5ನೇ ಸಾಹಿತ್ಯ ಸಮ್ಮೇಳನ
 

ಕುಂದಾಪ್ರ ಕನ್ನಡ 5ನೇ ಸಾಹಿತ್ಯ ಸಮ್ಮೇಳನ

ಕುಂದಾಪ್ರ ಕನ್ನಡ ಭಾಷೆಯ ಸೊಗಡಿನ ದಾಖಲೀಕರಣ ಅಗತ್ಯ - ಕೆ.ಜಯಪ್ರಕಾಶ್ ಹೆಗ್ಡೆ

by Kundapur Xpress
Spread the love

ಕೋಟ : ಕುಂದಾಪ್ರ ಕನ್ನಡದ ನಿಜವಾದ ಸೊಗಡು ಕಾಣ ಸಿಗುವುದು ಗ್ರಾಮಾಂತರ ಭಾಗದಲ್ಲಿ. ಗ್ರಾಮೀಣ ಭಾಗದ ನಟ್ಟಿ ನೆಡುವ ಹೆಂಗಸರು, ಉಳುಮೆ ಮಾಡುವ ಗಂಡಸರು, ಭತ್ತ ತುಳಿಯುವವರು ಹೀಗೆ ಹತ್ತಾರು ವಿಭಾಗಗಳಿಂದ ಕುಂದಾಪ್ರ ಕನ್ನಡದ ಸೊಗಡು ಹರಿದು ಬಂದಿದೆ.
ಅವೆಲ್ಲದರ ದಾಖಲೀಕರಣ ಅಗತ್ಯ ಎಂದು ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.
ಅವರು ಭಾನುವಾರ ಕೋಟ ಡಾ. ಶಿವರಾಮ ಕಾರಂತ ಪ್ರತಿಷ್ಠಾನ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ, ಕೋಟತಟ್ಟು ಗ್ರಾ.ಪಂ., ಉಸಿರು ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಆಶ್ರಯದಲ್ಲಿ ಮೇ 4ಕ್ಕೆ ಕೋಟದ ಕಾರಂತ ಥೀಮ್ ಪಾರ್ಕನಲ್ಲಿ ನಡೆದ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ಕಾಂಬ ಉದ್ಘಾಟನೆ ಮಾಡಿ ಮಾತನಾಡಿದರು.
ಭಾಷಿ ಬೆಳ್ಸಕರೆ ಮೊದಲ್ ಮಕ್ಕಳಿಗ್ ಹೇಳಿ ಕೊಡ್ಕ್. ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕುಂದಾಪ್ರ ಭಾಷಿ ಬಗ್ಗೆ ಕೆಲಸ ಮಾಡಬೇಕು ಎಂದರು. ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಡಾ. ಅಣ್ಣಯ್ಯ ಕುಲಾಲ ಉಳ್ತೂರು ಮಾತನಾಡಿ, ನಮ್‌ಭಾಷಿನ ಪ್ರೀತಿ ಮಾಡ್ಕ್  ಬೇರೆ ಭಾಷಿ ಬಗ್ಗೆ ಆಸಕ್ತಿ ತೋರ್ಸ್ಕ ಆಗಲಿಕೆ ಎಲ್ಲ ವಿಚಾರ ತಿಳುಕೆ ಸಾಧ್ಯ ಕುಂದಾಪ್ರ ಕನ್ನಡದ ಈ ಕಾರ್ಯಕ್ರಮ ಒಂದಷ್ಟ್ ಜನರಿಗೆ ಪ್ರೇರಣೆಯಾಗಲಿ ಎಂದರು.
ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರಂತ ಪ್ರತಿಷ್ಠಾನದ್ ಕಾರ್ಯಧ್ಯಕ್ಷ ಆನಂದ ಸಿ.ಕುಂದರ್, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ, ಕಾರಂತ ಟ್ರಸ್ಟ್ ಟ್ರಸ್ಟಿ ಸುಬ್ರಾಯ ಆಚಾರ್ಯ ಇದ್ದರು.
ಕಾರ್ಯಕ್ರಮದ್ ಸಂಯೋಜಕ, ಕಾರಂತ ಟ್ರಸ್ಟಿನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ಸತೀಶ್ ವಡ್ಡರ್ಸೆ ಕಾರ್ಯಕ್ರಮದ ಆಶಯದ ಬಗ್ಗೆ ಮಾತನಾಡಿದರು.ಕಾರ್ಯಕ್ರಮವನ್ನು ಸ್ಥಳೀಯ ಶಿಬಿರಾರ್ಥಿ ಮಕ್ಕಳು ಕುಂದಗನ್ನಡದಲ್ಲಿ ನಿರೂಪಿಸಿ ಗಮನ ಸೆಳೆದರು.
ಬ್ರಹ್ಮಾವರ ತಾಲೂಕು ಕ.ಸಾ.ಪ. ಅಧ್ಯಕ್ಷ ರಾಮಚಂದ್ರ ಐತಾಳ ಧನ್ಯವಾದ ಸಲ್ಲಿಸಿದರು. ಕವಿಗೋಷ್ಠಿ, ಕುಂದಕನ್ನಡದ ಹರಟೆ, ಅಧ್ಯಕ್ಷರ ಜತಿಗೆ ಮಾತುಕತೆ ನಡೆಯಿತು

 

Related Articles

error: Content is protected !!