ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ
17-03-2023 ರಂದು ಬ್ರಹ್ಮಾವರ ಶಾಸಕರ ಕಚೇರಿಯಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ 25 ಕಡತಗಳನ್ನು ಪರಿಶೀಲಿಸಿ 15 ಕಡತಗಳಿಗೆ (9.45 ಎಕ್ರೆ) ತಾತ್ಕಾಲಿಕ ಮಂಜೂರಾತಿ ನೀಡಿ 10 ಕಡತಗಳನ್ನು ಕೃತ ಇರುವ ಬಗ್ಗೆ ಸ್ಥಳ ಪರಿಶೀಲನೆ ಮಾಡಿ ಮುಂದಿನ ಸಭೆಯಲ್ಲಿ ಮಂಡಿಸುವಂತೆ ಸೂಚಿಸಿದರು
ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಸದಸ್ಯರುಗಳಾದ ರಾಜು ಪೂಜಾರಿ, ರಜನಿ ಶೆಟ್ಟಿ ಮತ್ತು ಬ್ರಹ್ಮಾವರ ತಾಲೂಕಿನ ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು