ಕೋಟ: ಸಾಲಿಗ್ರಾಮ ಪ.ಪಂ. ಎರಡನೇ ಅವಧಿಯ ಅಧಿಕಾರಾವಧಿಯ ಆಯ್ಕೆ ಪ್ರಕ್ರಿಯೆ ಮಂಗಳವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಚುನಾವಣಾಧಿಕಾರಿಯಾಗಿ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆಗಳು ನಡೆದವು.ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಮಾರಿಗುಡಿ ವಾರ್ಡ್‍ನ ಸದಸ್ಯೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷರಾಗಿ ಬಿಜೆಪಿಯ ಕಾರ್ಕಡ ತೆಂಕುಹೋಳಿ ವಾರ್ಡ್‍ನ ಗಿರಿಜಾ ಪೂಜಾರಿ ಪಕ್ಷದ ಒಮ್ಮತದ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಆಯ್ಕೆಯಾಗಿದರು.
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಎ) ಮಹಿಳೆಗೆ ಮೀಸಲಾತಿ ಫೋಷಿಸಿದ ಹಿನ್ನಲ್ಲೆಯಲ್ಲಿ . ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷ ಸ್ಥಾನಕ್ಕೆ ಗಿರಿಜಾ ಪೂಜಾರಿ ನಾಮಪತ್ರ ಸಲ್ಲಿಸಿದ್ದರು. ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಕ್ಕೆ ಕಾಂಗ್ರೆಸ್‍ನಿಂದ ಝಹಿರಾ ನಾಮ ಪತ್ರ ಸಲ್ಲಿಸಿದ್ದರು.
16 ಮಂದಿ ಸಂಖ್ಯಾಬಲದ ಸಾಲಿಗ್ರಾಮ ಪ.ಪಂ.ನಲ್ಲಿ ಬಿಜೆಪಿಯ 10, ಕಾಂಗ್ರೆಸ್‍ನ 5, ಪಕ್ಷೇತರ ಓರ್ವ ಸದಸ್ಯರಿದ್ದು ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಶಾಸಕ ಕಿರಣ್ ಕೊಡ್ಗಿ ಮತದೊಂದಿಗೆ 11, ಕಾಂಗ್ರೆಸ್‍ನ ಬೆಂಬಲಿತರು 5 ಮತಗಳನ್ನು ಪಡೆದರು. ಪಕ್ಷೇತರ ಸದಸ್ಯೆ ರತ್ನಾ ನಾಗರಾಜ್ ಗಾಣಿಗ ತಟಸ್ಥವಾಗುಳಿದದ್ದು ಎದ್ದು ಕಾಣುತ್ತಿತ್ತು.
ಅವಿರೋಧ ಹಿನ್ನಲ್ಲೆಯಲ್ಲಿ ಕಾಂಗ್ರೆಸ್ ಸ್ಪರ್ಧೆ
ಕಾಂಗ್ರೆಸ್‍ನಲ್ಲಿ ಐದೇ ಮಂದಿ ಸದಸ್ಯರಿದ್ದರೂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧೆ ಎನ್ನುವಂತದ್ದು ಇರಬೇಕು, ಅವಿರೋಧ ಸರಿಯಲ್ಲ ಎನ್ನುವ ನೆಲೆಯಲ್ಲಿ ಸಂಖ್ಯಾಬಲ ಇಲ್ಲದಿದ್ದರೂ ತಮ್ಮ ಪಕ್ಷದಿಂದ ನಾಮಪತ್ರ ಸಲ್ಲಿಸಿದರು ಎಂದು ಪಟ್ಟಣಪಂಚಾಯತ್‍ನ ಕಾಂಗ್ರೆಸ್‍ನ ವಿಪಕ್ಷ ನಾಯಕ ಶ್ರೀನಿವಾಸ್ ಅಮೀನ್ ತಿಳಿಸಿದರು.ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮುಖ್ಯಾಧಿಕಾರಿ ಶಿವ ನಾಯ್ಕ್ ಉಪಸ್ಥಿತರಿದ್ದರು.ಸಾಲಿಗ್ರಾಮಪಟ್ಟಣಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷ ಸ್ಥಾನಕ್ಕೆ ಗಿರಿಜಾ ಪೂಜಾರಿ ಆಯ್ಕೆಯಾದರು