ಉಡುಪಿ : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿ ಪ್ರಯುಕ್ತ ಉಡುಪಿ ನಗರದ ಬೋರ್ಡ್ ಹೈ ಸ್ಕೂಲ್ ಮೈದಾನದಲ್ಲಿ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಭಾರತ ಸರಕಾರ ಜಿಲ್ಲಾಡಳಿತ ಮತ್ತು ಮೈ ಭಾರತ ಉಡುಪಿ ಇವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಎನ್ಎಸ್ಎಸ್,, ಎನ್ ಸಿ ಸಿ ಮತ್ತು ರೇಂಜರ್ಸ್ ಹಾಗೂ ರೋವರ್ಸ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಸರ್ದಾರ್ ವಲ್ಲಭಬಾಯಿ ಪಟೇಲ್ ರವರ 150ನೆಯ ಜನ್ಮದಿನೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ಏಕತಾ ಪಾದಯಾತ್ರೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ನವೀನ್ ಶೆಟ್ಟಿ ಕುತ್ಯಾರು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ,ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಜಿಲ್ಲಾ ಅಪಾರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ ಜಿಲ್ಲಾ ಕ್ರೀಡಾಧಿಕಾರಿ ರೋಷನ್ ಶೆಟ್ಟಿ,ಹಾಗೂ ಬಿಜೆಪಿಯ ಜಿಲ್ಲಾ ಮುಖಂಡರು ಪಕ್ಷದ ಕಾರ್ಯಕರ್ತರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

