Home » ಸಾರ್ವಜನಿಕರ ಅರ್ಜಿಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಸ್ಥಳದಲ್ಲೇ ಪರಿಹಾರಕ್ಕೆ ಯತ್ನ
 

ಸಾರ್ವಜನಿಕರ ಅರ್ಜಿಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಸ್ಥಳದಲ್ಲೇ ಪರಿಹಾರಕ್ಕೆ ಯತ್ನ

ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಶಾಸಕ ಗಂಟಿ ಹೊಳೆ

by Kundapur Xpress
Spread the love

ಬೈಂದೂರು : ತಾಲೂಕು ಕಚೇರಿ “ಪ್ರಜಾ ಸೌಧ ” ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ವಿವಿಧ ಸಮಸ್ಯೆಗಳೊಂದಿಗೆ ಬಂದ ಸಾರ್ವಜನಿಕರ ಅಹವಾಲುಗಳನ್ನು ಅಧಿಕಾರಿಗಳ ಜೊತೆಗೂಡಿ ಸ್ವೀಕರಿಸಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿ ಹೊಳೆಯವರು ಕ್ಷೇತ್ರದ ಎಲ್ಲಾ ನಾಗರಿಕರು ವಿವಿಧ ಸಮಸ್ಯೆಯನ್ನು ಹೊತ್ತು ತಾಲೂಕು ಕಚೇರಿ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿ ಗಳಿಗೆ ಅಲೆದಾಡುವುದನ್ನು ತಪ್ಪಿಸಲು ಅಂತಹ ಸಾರ್ವಜನಿಕರ ಅಹವಾಲುಗಳನ್ನು ಅಧಿಕಾರಿಗಳ ಮುಂದೆಯೇ ಪಡೆದು ಸ್ಥಳದಲ್ಲಿಯೇ ಪರಿಹಾರ ಕ್ರಮಕ್ಕೆ ಪ್ರಯತ್ನಿಸಲಾಗುವುದು ಎಂದರು.

ಪ್ರತೀ ಗುರುವಾರ ಬೈಂದೂರು ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ:

ಸಾರ್ವಜನಿಕ ಅಹವಾಲು ಸ್ವೀಕಾರದ ನಂತರ ಮಾತನಾಡಿದ ಶಾಸಕರು ತಾಲೂಕು ಕಚೇರಿ ಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಪ್ರತೀ ಗುರುವಾರ ಬೈಂದೂರು ತಾಲೂಕು ಕಚೇರಿಯಲ್ಲಿ ರುವ ಶಾಸಕರ ಕಚೇರಿ ಯಲ್ಲಿ ಅಧಿಕಾರಿಗಳೊಂದಿಗೆ ಸಾರ್ವಜನಿಕ ಅಹವಾಲು ಸ್ವೀಕಾರ ಇಟ್ಟು ಕೊಳ್ಳಲಾಗುವುದು ಎಂದರು.
 

Related Articles

error: Content is protected !!