ಉಡುಪಿ : ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಾಸ್ತಾನ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಜನರ ವಾಹನಗಳಿಗೆ ಈ ಹಿಂದೆ ನೀಡುತ್ತಿದ್ದ ವಿನಾಯಿತಿ ಕಲ್ಪಿಸಬೇಕೆಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಗುತ್ತಿಗೆದಾರರಿಗೆ ತಿಳಿಸಿದರು.
ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ವಸೂಲಾತಿಗೆ ಸಂಬಂಧಿಸಿದಂತೆ ಟೋಲ್ ಗಳಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯಿತಿ ನೀಡುವ ವಿಚಾರಕ್ಕೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಟೋಲ್ ಬೇಡ ಎಂದು ಸೂಚನೆ
ಸಾಸ್ತಾನ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಲಿಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇದ್ದು, ಸ್ಥಳೀಯ ಜನರ ಸುಂಕ ವಸೂಲಾತಿ ಕೇಂದ್ರದ ಸುತ್ತಮುತ್ತ ವಾಸವಿದ್ದು, ದೈನಂದಿನ ಪ್ರತಿಯೊಂದು ಕಾರ್ಯಕ್ಕೂ ಟೋಲ್ ಅನ್ನು ದಾಟುವ ಪ್ರಸಂಗ ಒದಗಿ ಬರಲಿದ್ದು, ಪ್ರತಿ ಬಾರಿಯೂ ಶುಲ್ಕ ಪಾವತಿ ಮಾಡಲು ಕಷ್ಟ ಸಾಧ್ಯ. ಕೋಟ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸ್ಥಳೀಯ ಖಾಸಗಿ ಹಾಗೂ ಸಣ್ಣ ವಾಣಿಜ್ಯ ವ್ಯಾಪಾರದ ವಾಹನಗಳಿಗೆ ಟೋಲ್ ಶುಲ್ಕ ವಿನಾಯಿತಿ ನೀಡಬೇಕೆಂದು ಸೂಚನೆ ನೀಡಿದರು