Home » ಬಿಲ್ಲವ ಶಾಸಕರಿಗೆ ಮಂತ್ರಿ ಸ್ಥಾನ ನೀಡಿ
 

ಬಿಲ್ಲವ ಶಾಸಕರಿಗೆ ಮಂತ್ರಿ ಸ್ಥಾನ ನೀಡಿ

ಸತ್ಯಜಿತ್ ಸುರತ್ಕಲ್

by Kundapur Xpress
Spread the love

ಮಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಬಿಲ್ಲವ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಒತ್ತಾಯಿಸಿದ್ದಾರೆ. ನೂತನ ಸರಕಾರ ಮಂತ್ರಿಮಂಡಲ ರಚನೆ ಸಂದರ್ಭ ನಮ್ಮ ಸಮಾಜವನ್ನು ಪರಿಗಣಿಸದಿರುವುದು ಬೇಸರದ ಸಂಗತಿ. ಇಬ್ಬರು ವಿಧಾನ ಪರಿಷತ್ ಸದಸ್ಯರು, 5 ಜನ ವಿಧಾನಸಭಾ ಸದಸ್ಯರನ್ನು ಹೊಂದಿರುವ ನಮ್ಮ ಸಮಾಜಕ್ಕೆ ಕನಿಷ್ಠ ಎರಡು ಮಂತ್ರಿ ಸ್ಥಾನ ನೀಡಬೇಕು ಎಂದು ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.

ರಾಜ್ಯದಲ್ಲಿ ಜನಸಂಖ್ಯೆಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಬಿಲ್ಲವ, ಈಡಿಗ, ನಾಮಧಾರಿ ಸೇರಿದಂತೆ 26 ಪಂಗಡಗಳ ಶ್ರೇಯೋಭಿವೃದ್ಧಿಗೆ ಅಧಿಕೃತ ಆದೇಶವಾಗಿರುವ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ತಕ್ಷಣ ರಚಿಸಬೇಕು. ವಾರ್ಷಿಕ 500 ಕೋಟಿ ರೂ. ಮೀಸಲಿಡಬೇಕು ಎಂದು ಆಗ್ರಹಿಸಿದರು. 2ಎ ಪ್ರವರ್ಗದಲ್ಲಿರುವ ಯಾವುದೇ ಸಮಾಜಕ್ಕೆ ಶೇ. 15 ಮೀಸಲಾತಿಯನ್ನು ವ್ಯತ್ಯಾಸ ಆಗದಂತೆ ನೋಡಿಕೊಳ್ಳಬೇಕು. ಕಾಂತರಾಜು ಆಯೋಗದ ವರದಿಯನ್ನು ಜಾರಿ ಮಾಡಲು ಕ್ರಮ ಕೈಗೊಳ್ಳಬೇಕು, ಅದರ ಜತೆಯಲ್ಲಿ ವ್ಯತ್ಯಾಸ ಆಗಿರುವ ಸಮಾಜದ ಗಣತಿ ಮತ್ತೊಮ್ಮೆ ಪರಿಶೀಲಿಸಬೇಕು, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರಣಿಕ ಪುರುಷರಾದ ಕೋಟಿ-ಚೆನ್ನಯರ ಹೆಸರು ಇರಿಸಬೇಕು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂಗಾರಪ್ಪನವರ ಹೆಸರು ಇಡಬೇಕು. ಸಿಗಂದೂರಿನ ವ್ಯವಸ್ಥೆಯನ್ನು ಸಂಪೂರ್ಣ ಧರ್ಮದರ್ಶಿಗಳ ಸಮಿತಿ ನಿರ್ವಹಣೆಗೆ ನೀಡಬೇಕು. ಮತ್ತು ಅದರ ಮೇಲಿರುವ ಎಲ್ಲ ಮೊಕದ್ದಮೆಗಳನ್ನು ವಾಪಾಸ್ ಪಡೆಯುವುದು, ಶಿವಮೊಗ್ಗ ಎಲ್ಲ ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದರು.

   

Related Articles

error: Content is protected !!