Home » ಪ.ಜಾ. ಸಮುದಾಯಕ್ಕೆ ಮೀಸಲಿಟ್ಟ ಅನುದಾನ ದುರ್ಬಳಕೆ
 

ಪ.ಜಾ. ಸಮುದಾಯಕ್ಕೆ ಮೀಸಲಿಟ್ಟ ಅನುದಾನ ದುರ್ಬಳಕೆ

: ಕಿರಣ್ ಕುಮಾರ್ ಬೈಲೂರು ಆರೋಪ

by Kundapur Xpress
Spread the love

ಉಡುಪಿ : ಅತಿ ಹೆಚ್ಚು ಸಾಲ ಮಾಡಿರುವ ಮುಖ್ಯಮಂತ್ರಿ ಎಂಬ ಕುಖ್ಯಾತಿಗೆ ಪಾತ್ರವಾಗಿರುವ ಸಿದ್ದರಾಮಯ್ಯನವರು ಈಗಾಗಲೇ ಹೆಚ್ಚುವರಿ ಸಾಲವನ್ನು ಮಾಡಿರುವ ಜೊತೆಗೆ ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಸುಮಾರು 11 ಸಾವಿರ ಕೋಟಿ ಅನುದಾನವನ್ನು ಇತರ ಉದ್ದೇಶಗಳಿಗೆ ಬಳಸಿ ಪ.ಜಾ. ಸಮುದಾಯಕ್ಕೆ ಅನ್ಯಾಯವೆಸಗಿರುವುದು ಜಗಜ್ಜಾಹೀರಾಗಿದೆ. ಸರಕಾರ ಇದೀಗ ಮುದ್ರಾಂಕ ಶುಲ್ಕವನ್ನು 5 ಪಟ್ಟು ಏರಿಕೆ ಮಾಡಿ ಖಜಾನೆ ತುಂಬಿಸಲು ಹೊರಟಿದೆ. ಕಂದಾಯ, ಸಾರಿಗೆ ಸಹಿತ ಎಲ್ಲಾ ಕಚೇರಿಗಳು ಕಾಂಗ್ರೆಸ್ ಸರ್ಕಾರದ ಕಲೆಕ್ಷನ್ ಸೆಂಟರ್ ಗಳಾಗಿವೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಆರೋಪಿಸಿದರು. ಜನಸಾಮಾನ್ಯರ ಜನಪ್ರತಿನಿಧಿ ಎಂದೇ ಖ್ಯಾತರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿಸಲು ಕೊಡುಗೆ ನೀಡಬೇಕು ಎಂದು ಅವರು ವಿನಂತಿಸಿದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಮೆಚ್ಚಿ ಸ್ವಯಂ ಪ್ರೇರಣೆಯಿಂದ ಬಿಜೆಪಿಯತ್ತ ಒಲವು ತೋರಿದ ಬಾಳಿಗಾ ಫಿಶ್ ನೆಟ್ ಕಂ.ಲಿ. ಇದರ ಮಹಾ ಪ್ರಬಂಧಕ ಚಂದ್ರಶೇಖರ್ ಸುವರ್ಣ ಅಂಬಲಪಾಡಿ ಇವರನ್ನು ಶಾಸಕ ಯಶ್ಪಾಲ್ ಸುವರ್ಣ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಅಂಬಲಪಾಡಿ-ಕಡೆಕಾರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಸುಧಾಕರ್, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ, ನಗರ ಎಸ್.ಸಿ. ಮೋರ್ಚಾ ಅಧ್ಯಕ್ಷ ಅಜಿತ್ ಕಪ್ಪೆಟ್ಟು ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಶಕ್ತಿಕೇಂದ್ರ ಮತ್ತು ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

   

Related Articles

error: Content is protected !!