ಕೋಟ: ಮಂದಾರ್ತಿ ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಕಾಡೂರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ ಜೊತೆಗೆ ನೂತನವಾಗಿ ಬಿಜೆಪಿ ಕೇಂದ್ರದ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಆಯ್ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದರು. ಬಿಜೆಪಿಯ ಪಕ್ಷ ಸಂಘಟನೆಯ ಕುರಿತು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಪ್ರಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ ಎಸ್. ಕಾಡೂರು ಗ್ರಾಮ ಪಂಚಾಯತಿನ ಅಧ್ಯಕ್ಷ ಜಲಂಧರ ಶೆಟ್ಟಿ, ನಿಕಟಪೂರ್ವ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಮಂಡಲ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಕಾಡೂರು, ಹಾಗೂ ಕಾಡೂರು ಗ್ರಾಮ ಪಂಚಾಯಿತಿನ ಸದಸ್ಯರು ಮತ್ತು ಬಿಜೆಪಿಯ ಪ್ರಮುಖರು ಉಪಸ್ಥಿತಿಯಲ್ಲಿ ಶಾಸಕರ ಸೂಚನೆಯಂತೆ ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅವರು ನೂತನ ಬಿಜೆಪಿಯ ಕಾಡೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸತೀಶ್ ಕುಲಾಲ, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ರಾವ್ ತಂತ್ರಾಡಿ ಅವರನ್ನು ಅವರನ್ನು ಘೋಷಿಸಿದರು.

