Home » ರಸ್ತೆ ಸುರಕ್ಷತಾ ಮತ್ತು ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
 

ರಸ್ತೆ ಸುರಕ್ಷತಾ ಮತ್ತು ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

by Kundapur Xpress
Spread the love

ಬಸ್ರೂರು :  ಶ್ರೀ ಶಾರದಾ ಕಾಲೇಜು ಇಲ್ಲಿನ ಮಾದಕ ದ್ರವ್ಯ ವಿರೋಧಿ ಘಟಕ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಮಾದಕ ದ್ರವ್ಯ ವಿರೋಧಿ ಬಗ್ಗೆ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಂಡಲ್ಲೂರು ಗ್ರಾಮಾಂತರ ಪೋಲಿಸ್ ಠಾಣೆಯ ಆರಕ್ಷಕ ನೀರೀಕ್ಷಕರಾದ ಶ್ರೀ ಭೀಮಾ ಶಂಕರ್ ಸಿನ್ನೂರ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಆಪಘಾತ ,ಪ್ರಾಣಹಾನಿ ಸಂಭವಗಳು ಕಡಿಮೆ ಮಾಡಲು ಸಾಧ್ಯ ಎಂದರು.ಮಾದಕ ದ್ರವ್ಯ ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳು, ಕಾನೂನಿನಲ್ಲಿ ಇರುವ ಶಿಕ್ಷೆ ಮತ್ತು ಸೈಬರ್ ಕೇಸ್ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ ಚಂದ್ರಾವತಿ ಶೆಟ್ಟಿ ವಹಿಸಿದ್ದರು.ಕಾರ್ಯಕ್ರಮದ ಸಂಯೋಜಕರಾದ ಡಾ ರವಿಚಂದ್ರ, ಐಕ್ಯೂಎಸಿ ಸಂಯೋಜಕರಾದ ಶ್ರೀ ಸಂದೀಪ್ ಕೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶ್ರೀ ರಾಘವೇಂದ್ರ ಶೆಟ್ಟಿ ಎಸ್ ನಿರೂಪಿಸಿ, ಶ್ರೀ ದೀಪಕ್ ಕುಮಾರ್ ವಂದಿಸಿದರು

   

Related Articles

error: Content is protected !!