ಉಡುಪಿ : ನವರಾತ್ರಿ ಉತ್ಸವದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಶ್ರೀ ಶಾರದಾ ಪೂಜೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಂಪನ್ನಗೊಂಡಿತು. ರಶ್ಮಿ ಭಟ್ ರವರಿಂದ ವೀಣಾ ವಾದನ, ಮಾಯಾ ಕಾಮತ್ ಬಳಗದಿಂದ ಭಜನಾ ಸೇವೆ ನಡೆಯಿತು. ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್, ಬಿಜೆಪಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ,