ಕೋಟಾ : ಡಾll. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಡಾll ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ “ಇಂಪನ” ಸಂಗೀತ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಖ್ಯಾತ ಶಾಸ್ತ್ರೀಯ ಸಂಗೀತಗಾರರಾದ ಡಾ. ವಿದ್ಯಾಭೂಷಣ ಅವರನ್ನು ಸನ್ಮಾನಿಸಿದರು
ಶಿವರಾಮ ಕಾರಂತರ ಸಾಹಿತ್ಯ ಕಲೆ ಸಂಸ್ಕೃತಿಯ ಅನಾವರಣ ಕಾರಂತ ಥೀಮ್ ಪಾರ್ಕ್ ಮೂಲಕ ಯುವ ಸಮೂಹವನ್ನು ತಲುಪುತ್ತಿದೆ ಕಾರಂತರು ಗಾಂಧೀಜಿ ಸಿದ್ಧಾಂತದ ಅನುಯಾಯಿಯಾಗಿದ್ದರು ಪದ್ಮಭೂಷಣ ಪ್ರಶಸ್ತಿಯನ್ನು ಹಿಂದೆ ನೀಡಿದ ಮಹಾನ್ ವ್ಯಕ್ತಿ ವಿಶ್ವಕೋಶ ಎಂದೇ ಖ್ಯಾತಿಯಾದ ಕಾರಂತರು ಆಧುನಿಕ ಠ್ಯಾಗೋರ್ ಎಂದು ಪ್ರಸಿದ್ಧರಾಗಿದ್ದರು ಎಂದು ಕರ್ನಾಟಕದ ಸಂಗೀತ ಲೋಕದ ದಿಗ್ಗಜರಾದ ಡಾ. ವಿದ್ಯಾಭೂಷಣರಿಗೆ ಡಾll ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನುಡಿದರು
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ವಿದ್ಯಾಭೂಷಣರು ಇದು ಬಯಸದೆ ಬಂದ ಭಾಗ್ಯ ಪ್ರಶಸ್ತಿಯನ್ನು ಹುಡುಕಿಕೊಂಡು ಹೋಗಬಾರದು ಅದು ನಮ್ಮನ್ನು ಅರಸಿಕೊಂಡು ಬರಬೇಕು ತಾನು ಈವರೆಗೆ ಯಾವುದೇ ಪ್ರಶಸ್ತಿ ಸನ್ಮಾನದ ಬಗ್ಗೆ ಯೋಚಿಸಿದವನಲ್ಲ ಆದರೆ ಕಾರಂತರ ಹೆಸರಿನ ಪ್ರಶಸ್ತಿ ಜ್ಙಾನಪೀಠದಷ್ಟೇ ಶ್ರೇಷ್ಠತೆಯನ್ನು ಹೊಂದಿದೆ ಇಲ್ಲಿನ ಕಾರಂತ ಥೀಮ್ ಪಾರ್ಕ್ ಕಣ್ಣುಗಳಿಂದ ಅಳೆಯಲು ಸಾಧ್ಯವಿಲ್ಲ ಅಂತ ವಿಶೇಷತೆ ಇಲ್ಲಿದೆ ಇದೊಂದು ಮುಂದಿನ ಜನಾಂಗಕ್ಕೆ ಕಾರಂತರನ್ನು ಪರಿಚಯಿಸುವಂತೆ ಮಾಡಿದೆ ಕಾರಂತರ ಬದುಕು ಇತರಿಗೆ ಸ್ಪೂರ್ತಿದಾಯಕವಾಗಿದೆ ಎಂದು ಅಭಿಪ್ರಾಯಪಟ್ಟರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ವಹಿಸಿದ್ದರು
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಬೈಂದೂರು ಶಾಸಕರಾದ ಗುರುರಾಜ್ ಗಂಟೆಹೊಳೆಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ.ಸತೀಶ್ ಕುಂದರ್, ಡಾll ಶಿವರಾಮ ಕಾರಂತ ಪ್ರತಿಷ್ಠಾನ ಕಾರ್ಯಾಧ್ಯಕ್ಷರಾದ ಆನಂದ್ ಸಿ ಕುಂದರ್ ಉಪಸ್ಥಿತರಿದ್ದರು