ಕುಂದಾಪುರ : ಭಾರತ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ವತಿಯಿಂದ ಇಂದು ದಿನಾಂಕ 24-09-2023 ರಂದು ಮಣಿಪಾಲದ ಜಿಲ್ಲಾಧಿಕಾರಿಗಳ ಅಟಲ್ ಬಿಹಾರಿ ವಾಜಪೇಯಿ ಆಡಿಟೋರಿಯಂನಲ್ಲಿ ಆಯೋಜಿಸಲಾದ “ರಾಷ್ಟ್ರೀಯ ವಯೋಶ್ರೀ ಯೋಜನೆ” ಯ
ಕಾರ್ಯಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು ಸಮಾರಂಭದಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ 186 ಫಲಾನುಭವಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ,
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಅಪರ ಜಿಲ್ಲಾಧಿಕಾರಿಗಳಾದ ಮಮತಾ ದೇವಿ, ಸಹಾಯಕ ಆಯುಕ್ತರಾದ ರಶ್ಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

