Home » ಅಮೃತ ಭಾರತ ರೈಲು ನಿಲ್ದಾಣ ಅಭಿವೃದ್ಧಿಗೆ ಉಡುಪಿ ಆಯ್ಕೆ
 

ಅಮೃತ ಭಾರತ ರೈಲು ನಿಲ್ದಾಣ ಅಭಿವೃದ್ಧಿಗೆ ಉಡುಪಿ ಆಯ್ಕೆ

ಶೋಭಾ ಕರಂದ್ಲಾಜೆ ಹರ್ಷ

by Kundapur Xpress
Spread the love

ಕುಂದಾಪುರ : ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪ್ರಾರಂಭಿಸಿದ ಅಮೃತ ಭಾರತ ರೈಲು ನಿಲ್ದಾಣಗಳ ಅಭಿವೃದ್ಧಿ ಯೋಜನೆ ಅಡಿ ಉಡುಪಿ ರೈಲು ನಿಲ್ದಾಣವನ್ನು ಆಯ್ಕೆ ಮಾಡಿರುವುದಕ್ಕೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹರ್ಷ ವ್ಯಕ್ತಪಡಿಸಿದ್ದಾರೆ. ಭಾರತೀಯ ರೈಲ್ವೆ ನರೇಂದ್ರ ಮೋದಿ ಹಾಗೂ ಅಶ್ವಿನಿ ವೈಷ್ಣವ್ ನೇತೃತ್ವದಲ್ಲಿ ‘ಅಮೃತ್ ಭಾರತ್’ ಯೊಜನೆಯ ಮೂಲಕ ಉಡುಪಿ ರೈಲು ನಿಲ್ದಾಣವನ್ನು ಸಂಪೂರ್ಣವಾಗಿ  ಆಧುನೀಕರಿಸಿ ವಿಶ್ವದರ್ಜೆಯ ಪ್ರಯಾಣಿಕ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗಲಿದೆ. ತನ್ಮೂಲಕ ಶೈಕ್ಷಣಿಕ ಕೇಂದ್ರ ಮಣಿಪಾಲ ಧಾರ್ಮಿಕ ಕೇಂದ್ರ ಉಡುಪಿ ಹಾಗೂ ಬಂದರು ನಗರಿ ಮಲ್ಪೆಗೆ ಸಂಬಂಧಿಸಿದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗಲಿದೆ. ಅಮೃತ್ ಭಾರತ್ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಲು ರೈಲ್ವೆ ಇಲಾಖೆಗೆ ಸೂಚಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

   

Related Articles

error: Content is protected !!