ಉಡುಪಿ: ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಭಾರತ್ ಅಕ್ಕಿ ಮಾರಾಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆದಿ ಉಡುಪಿ ಸಂತೆ ಮಾರ್ಕೆಟ್ ಬಳಿ ಚಾಲನೆ ನೀಡಲಿದ್ದಾರೆ. ಉತ್ತಮ ಗುಣಮಟ್ಟದ ಅಕ್ಕಿಯನ್ನು ಕೇಂದ್ರ ಸರಕಾರ ಸಬ್ಸಿಡಿ ದರದಲ್ಲಿ ಪ್ರತಿ ಕೆಜಿಗೆ ರೂ. 29 ರಂತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರತ್ ಅಕ್ಕಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.