67
ಕುಂದಾಪುರ : ಕೋಡಿ ಶ್ರೀರಾಮನಗರದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶಿಕ್ಷಕ ರಕ್ಷಕ ಸಭೆ ನಡೆಸಲಾಯಿತು. ಅಧ್ಯಕ್ಷತೆ ವಹಿಸಿದ ಶಾಲಾ ಸಂಚಾಲಕ ಕೋಡಿ ನಾಗೇಶ ಕಾಮತ್ ನಮ್ಮ ಸಂಸ್ಥೆಯು ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿ ಮತ್ತು ಸನಾತನ ಪರಂಪರಾಗತ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು. ವಿದ್ಯಾರ್ಥಿಗಳ ಬೆಳವಣೆಗೆಗೆ ಪೋಷಕರ ಪಾತ್ರವು ಬಹಳ ಮುಖ್ಯ ಎಂದು ಅವರು ತಿಳಿಸಿದರು ಶಾಲಾ ಪ್ರಾಂಶುಪಾಲ ಜಿತೇಂದ್ರ, ಶಿಕ್ಷಕರು ಹಾಗೂ ಪಾಲಕರು ಉಪಸ್ಥಿತರಿದ್ದು, ಪ್ರಣೀತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

