Home » ಕೋಡಿ ಶ್ರೀರಾಮ ವಿದ್ಯಾಕೇಂದ್ರ : ಯೋಗ ದಿನಾಚರಣೆ
 

ಕೋಡಿ ಶ್ರೀರಾಮ ವಿದ್ಯಾಕೇಂದ್ರ : ಯೋಗ ದಿನಾಚರಣೆ

by Kundapur Xpress
Spread the love

ಕುಂದಾಪುರ : ನಗರದ ಕೋಡಿಯ ಶ್ರೀರಾಮ ನಗರದಲ್ಲಿರುವ ಶ್ರೀರಾಮ ವಿದ್ಯಾ ಕೇಂದ್ರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು

ಶಾಲಾ ಸಂಚಾಲಕರಾದ ಕೋಡಿ ನಾಗೇಶ್ ಕಾಮತ್‌ರವರು ದೀಪ ಬೆಳಗಿಸುವ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಅವರು ಮಾತನಾಡಿ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗದ ನಿತ್ಯ ಅಭ್ಯಾಸಗಳನ್ನು ಮಾಡಿದಾಗ ಪರಿಪೂರ್ಣ ಆರೋಗ್ಯ ನಮ್ಮದಾಗುತ್ತದೆ ಎಂದರು

ಶಾಲಾ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜಿತೇಂದ್ರ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Related Articles

error: Content is protected !!