201
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಯತಿವರ್ಯರಾದ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಜಿಯವರನ್ನು ಬೆಂಗಳೂರಿನ ಶ್ರೀಪೀಠದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

ಧಾರ್ಮಿಕ, ಸಾಮಾಜಿಕ ಮಾತ್ರವಲ್ಲದೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲೂ ಸಾಧನೆಗೈದು ನಾಡಿನ ಕೀರ್ತಿಯನ್ನು ಜಗತ್ತಿಗೆ ಸಾರುತ್ತಿರುವ ಶ್ರೀ ಪೀಠದ ಬಗ್ಗೆ ಅಪಾರ ಭಕ್ತಿ ಹಾಗೂ ಗೌರವ ಇದೆ ಎಂದು ಕೋಟ ತಿಳಿಸಿದರು.

