ಬೆಂಗಳೂರು : ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಭಾನುವಾರ ಅರಮನೆ ಮೈದಾನದಲ್ಲಿ ನಡೆದ ಎರಡು ದಿನಗಳ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶ’ದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನಕ್ಕೆ ಮೋದಿ ಸರ್ಕಾರದಿಂದ ಆತಂಕ ಬಂದಿದೆ. ಅದನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಸಂವಿಧಾನಕ್ಕೆ ಧಕ್ಕೆ ಬಂದಿರುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು.
ಆರ್‌ಎಸ್‌ಎಸ್‌ನವರು ಸಂವಿಧಾನವನ್ನು ಗೌರವಿಸುವುದಿಲ್ಲ, ಸಾಮಾಜಿಕ ನ್ಯಾಯಕ್ಕೆ ವಿರೋಧವಾಗಿರುವ ಪಕ್ಷ ಎಂದರೆ ಬಿಜೆಪಿ. ಜನ ಅರ್ಥ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು. ಜಗತ್ತಿನ ಅನೇಕ ದೇಶಗಳ ಸಂವಿಧಾನಗ ಳನ್ನು ಅಧ್ಯಯನ ಮಾಡಿ ಅತ್ಯುತ್ತಮ ಅಂಶಗಳನ್ನು ಆಯ್ದುಕೊಂಡು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸೇರಿಸಿದ್ದಾರೆ ಎಂದರು