ಮೈಸೂರು : ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ ಎಂದು ಕೇಳುತ್ತಿದ್ದಾರೆ. ಆದರೆ, ನಾನು ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವರ್ಷ ಆಗಿ ಬಿಡುತ್ತದೆ. 83 ವರ್ಷ ಆದೆ ಮೇಲೆ ಇಷ್ಟೊಂದು ಉತ್ಸಾಹದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂಬುದು ಗೊತ್ತಿದೆ. ನನ್ನ ದೇಹದ ಸ್ಥಿತಿ ನನಗೆ ಮಾತ್ರ ಗೊತ್ತಿರುತ್ತೆ. ಹೀಗಾಗಿ ಚುನಾವಣಾ ರಾಜಕಾರಣ ಸಾಕು ಎಂದುಕೊಂಡಿದ್ದೇನೆ ಎಂದು ತಿಳಿಸಿದರು.