Home ಕರಾವಳಿ ಸುದ್ದಿ20 ಕ್ಷೇತ್ರದಲ್ಲಿ ಗೆಲುವು ಖಚಿತ

20 ಕ್ಷೇತ್ರದಲ್ಲಿ ಗೆಲುವು ಖಚಿತ

ಸಿದ್ದರಾಮಯ್ಯ

by Kundapur Xpress

ಮೈಸೂರು : ನಾವು ನಡೆಸಿರುವ ಹಲವು ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಸೇರಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎನ್ನುವ ವರದಿಗಳು ಬಂದಿವೆ. ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿ ನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು-ಕೊಡಗು ಮತ್ತು ಚಾಮರಾಜ ನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ‘ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ನಿಗಮ ಮಂಡಳಿಗಳ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

Related Articles