ಮೈಸೂರು : ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ವರುಣ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಬೇಕು. ಅಷ್ಟು ಲೀಡ್ ಬಂದದ್ದೇ ಆದರೆ ಯಾರೂ ನನ್ನನ್ನು ಮುಟ್ಟಲು ಸಾಧ್ಯವಿಲ್ಲ. ನಾನು ಇರಬೇಕೋ, ಬೇಡವೋ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ವರುಣ ಕ್ಷೇತ್ರದಲ್ಲಿ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿ ಮತಯಾಚಿಸಿದ್ದಾರೆ. ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಸವಾಲಾಗಿ ಸ್ವೀಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರದಿಂದ ತವರು ಜಿಲ್ಲೆಯಲ್ಲಿ ಮತ್ತೆ ಮೂರು ದಿನದ ಪ್ರವಾಸ ಆರಂಭಿಸಿದ್ದಾರೆ