ಉಡುಪಿ : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳಿಯಾರು ಬಳಿಯ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ 1 ಕೋಟಿ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು
ಈ ಸಂದರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾದ ಮಂಜುಳಾ, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಸಣ್ಣ ನೀರಾವರಿ ಇಲಾಖೆ ಸಹಾಯಕ ಅಭಿಯಂತರರಾದ ಮಮತಾ, ಮಜೂರು ಹಾಗೂ ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಮಜೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಸ್ಥಳೀಯರು ಉಪಸ್ಥಿತರಿದ್ದರು