ಕಾಪು : ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ (ನಿ.) ಇದರ ವಾರ್ಷಿಕ ಮಹಾಸಭೆಯಲ್ಲಿ ಇಂದು ದಿನಾಂಕ 31-08-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ (ನಿ.) ಇದರ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ (ನಿ.) ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು