ಉಡುಪಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಧುರೀಣ ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ಭಟ್ (94) ಭಾನುವಾರ ನಿಧನರಾಗಿದ್ದಾರೆ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ
ಕರಾವಳಿಯಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದ ಅವರು ಎಲ್.ಕೆ. ಆಡ್ವಾಣಿ ಅಟಲ್ ಬಿಹಾರಿ ವಾಜಪೇಯಿಯವರ ನಿಕಟವರ್ತಿಯಾಗಿದ್ದರು. ಮಾಜಿ ಸಚಿವ ದಿವಂಗತ ವಿ.ಎಸ್.ಆಚಾರ್ಯರಿತೂ ಮಾರ್ಗದರ್ಶಕರಾಗಿದ್ದರು. 2023 ರಲ್ಲಿ ಎಂ.ಜಿ.ಎಂ. ಮೈದಾನದಲ್ಲಿ ನಡೆದ ಅಟಲ್ ಉತ್ಸವದಲ್ಲಿ ಭಾಗಿಯಾಗಿದ್ದು ಇವರ ಕೊನೆಯ ಸಾರ್ವಜನಿಕ ಕಾರ್ಯಕ್ರಮವಾಗಿದೆ.
ಉಡುಪಿ ಪುರಸಭೆ ಅಧ್ಯಕ್ಷರಾಗಿ, ಕೊಡಗು ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿಯನ್ನು ತಳಮಟ್ಟದಲ್ಲಿ ಕಟ್ಟಿ ಬೆಳೆಸಿದ್ದರು. 1968ರಲ್ಲಿ ಉಡುಪಿಯಲ್ಲಿ ನಡೆದ ವಿಶ್ವಹಿಂದು ಪರಿಷತ್ ನ ಸಮಾವೇಶದ ಕಾರ್ಯದರ್ಶಿಯಾಗಿ ಸಮಾವೇಶ ಯಶಸ್ವಿಯಾಗಲು ಶ್ರಮಿಸಿದ್ದರು. ಸಮಾವೇಶಕ್ಕೆ ಆಗಮಿಸಿದ ಕಾರ್ಯಕರ್ತರು ಉಡುಪಿಯ ಜನರ ಮನೆ ಮನೆಯಲ್ಲಿ ತಂಗುವ ವಿಶಿಷ್ಟ ವ್ಯವಸ್ಥೆ ಮಾಡುವಲ್ಲಿ ಸೋಮಣ್ಣ ಮಹತ್ತರ ಪಾತ್ರ ವಹಿಸಿದ್ದರು.
ಕೊರೋನಾ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸೋಮಶೇಖರ್ ಭಟ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ, ಆರೋಗ್ಯವನ್ನು ವಿಚಾರಿಸಿದ್ದರು.
ಅವರ ನಿಧನಕ್ಕೆ ಆರ್.ಎಸ್.ಎಸ್. ಮುಖಂಡ ಶಂಭು ಶೆಟ್ಟಿ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಯಶಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, , ಕಿರಣ್ ಕುಮಾರ್ ಕೊಡ್ಲಿ, ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಾಜಿ ಜಿಲ್ಲಾಧ್ಯಕ್ಷರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಮಟ್ಟಾರ್ ರತ್ನಾಕರ್ಹೆ ಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ದ.ಕ ವಿಭಾಗ ಪ್ರಭಾರಿ, ಕಿದಿಯೂರು ಉದಯ್ ಕುಮಾರ್ಶೆಟ್ಟಿ, ಪಕ್ಷದ ಪ್ರಮುಖರಾದ ಶ್ರೀನಿಧಿ ಹೆಗ್ಡೆ, ಶ್ರೀಶ ನಾಯಕ್ ಪೆರ್ಣಂಕಿಲ, ನಯಾನ ಗಣೇಶ್, ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿಗಳಾದ ದಿನಕರ್ಶೆಟ್ಟಿ ಹೆರ್ಗ, ರೇಷ್ಮಾ ಉದಯ್ ಶೆಟ್ಟಿ, ಸುನೀಲ್ ಮಹಿಳಾಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ಸಂತಾಪ ಸೂಚಿಸಿದ್ದಾರೆ