ಕುಂದಾಪುರ: ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿದಿನ ದುರ್ಗಾಹೋಮ ಹಾಗೂ ಚಂಡಿಕಾ ಹೋಮಗಳು ನಡೆಯುತ್ತಿದ್ದು ಮಧ್ಯಾಹ್ನ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ಹಾಗೂ ಸಂಜೆ ಶ್ರೀ ದೇವಿಗೆ ನವರಾತ್ರಿ ವಿಶೇಷ ಪೂಜೆ ನಡೆಯುತ್ತಿದೆ.
ಪ್ರತಿ ನಿತ್ಯ 2 ಸಾವಿರಕ್ಕೂ ಮಿಕ್ಕಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದು ಪ್ರತಿನಿತ್ಯ 1 ಸಾವಿರಕ್ಕೂ ಮಿಕ್ಕಿ ಭಕ್ತರು ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸಬ್ಲಾಡಿ ಎನ್. ಮಂಜಯ್ಯ ಶೆಟ್ಟಿಯವರು ತಿಳಿಸಿದ್ದಾರೆ.
ದಿನಾಂಕ ಅಕ್ಟೋಬರ್ 24 ರಂದು ಮಂಗಳವಾರ ವಿಜಯದಶಮಿಯಂದು ಮಹಾನೈವೇದ್ಯ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಹಾಗೂ ಸಂಜೆ ಪುಪ್ಪ ರಥೋತ್ಸವ ಜರಗಲಿದೆ. ಪ್ರತಿದಿನ ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ