Home » ಪ್ರಯಾಗ್ ರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀಗಳಿಂದ ಚಾಲನೆ
 

ಪ್ರಯಾಗ್ ರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀಗಳಿಂದ ಚಾಲನೆ

by Kundapur Xpress
Spread the love

ಉಡುಪಿ : ಉಡುಪಿ ಜಿಲ್ಲೆಯಿಂದ ಮಹಾ ಕುಂಭ ಮೇಳಕ್ಕೆ ಪ್ರಯಾಗ್ ರಾಜ್ ಗೆ ತೆರಳಿರುವವರಿಗೆ ಆಯೋಜಿಸಲಾದ “ಉಡುಪಿ – ಪ್ರಯಾಗ್ ರಾಜ್” ವಿಶೇಷ ರೈಲಿಗೆ  ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿ ನಿಶಾನೆ ತೋರಿಸಿ ಚಾಲನೆ ನೀಡಿದರು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಜೊತೆಗಿದ್ದರು

ಮಹಾ ಕುಂಭ ಮೇಳಕ್ಕೆ ತೆರಳುತ್ತಿರುವ ಕಾಪು ವಿಧಾನಸಭಾ ಕ್ಷೇತ್ರದ ಸುಮಾರು 170 ಜನರಿಗೆ ಶಾಸಕರು ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Related Articles

error: Content is protected !!