Home » ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ
 

ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

ಹೆಮ್ಮಾಡಿ ಜನತಾ ಕಾಲೇಜು

by Kundapur Xpress
Spread the love

ಹೆಮ್ಮಾಡಿ : ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಅದ್ದೂರಿಯಾಗಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತರು ಹಾಗೂ ತೆಲುಗು ಟೈಟಾನ್ಸ್ ಕಬಡ್ಡಿ ತಂಡದ ಕೋಚ್ ಆಗಿರುವ ಶ್ರೀ ಜಗದೀಶ್ ಕುಂಬಳೆ ಮಾತನಾಡಿ ಕ್ರೀಡಾ ಪ್ರತಿಭೆಗಳು ಅರಳಬೇಕಾದರೆ ಇಂತಹ ವೇದಿಕೆಗಳು ತಳಹದಿ,ಧೈರ್ಯದಿಂದ ಆಡಿ ಕ್ರೀಡೆಯಿಂದಲೂ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ವಹಿಸಿದ ಕಾಲೇಜಿನ‌ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಮಾತನಾಡಿ ಶಿಕ್ಷಣ ಪರಿಪೂರ್ಣವಾಗಬೇಕಾದರೆ ಪಠ್ಯದ ಜೊತೆಗೆ ಸಹಪಠ್ಯ ಪ್ರಮುಖವಾದದ್ದು ಆ ನೆಲೆಯಲ್ಲಿ ನಮ್ಮ ಸಂಸ್ಥೆಯಲ್ಲಿ ಸಮಾನ ಪ್ರಾಧಾನ್ಯತೆ ನೀಡುತ್ತಿದ್ದು ವಿದ್ಯಾರ್ಥಿ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.ಸೋಲು-ಗೆಲುವು ಇವೆರೆಡನ್ನು ಸಮನಾಗಿ ಸ್ವೀಕರಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿಗಳಾಗಿರುವ ಶ್ರೀ ಸುಕೇಶ್ ಶೆಟ್ಟಿಯವರು ಮಾತನಾಡಿ ಜನತಾ ಕಾಲೇಜಿನ ಕಾರ್ಯಕ್ರಮ ಸಂಘಟನೆಗೆ ಶ್ಲಾಘನೆ ವ್ಯಕ್ತಪಡಿಸಿ,ಧೈರ್ಯ ಹಾಗೂ ಛಲದಿಂದ ಆಡಿ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಸಂಯೋಜಕರಾದ ಶ್ರೀ ರಾಮ ಶೆಟ್ಟಿ,ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳಾವರ,ಕಾಲೇಜಿನ ಉಪ-ಪಾಂಶುಪಾಲರಾದ ಶ್ರೀ ರಮೇಶ ಪೂಜಾರಿ,ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಖ್ಯ ಶಿಕ್ಷಕಿ ಕು|ದೀಪಿಕಾ ಆಚಾರ್ಯ, ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವ್ರಂದದವರು ಉಪಸ್ಥಿತರಿದ್ದರು.ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಜೀವನ್ ಶೆಟ್ಟಿ,ಬೈಂದೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪರಿವೀಕ್ಷಕರಾದ ಶ್ರೀ ಅರುಣ್ ಕುಮಾರ್ ಶೆಟ್ಟಿ,ಕಟ್ ಬೇಲ್ತೂರು ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ನಾಗರಾಜ್ ಪುತ್ರನ್ ರವರ ಉಪಸ್ಥಿತಿಯಲಿ‌ ವಿಜೇತ ತಂಡಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಪದವಿಪೂರ್ವ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆಆಯ್ಕೆಯಾದರು.ಉಳಿದಂತೆ ಕ್ರಮವಾಗಿ ದ್ವಿತೀಯ ಸ್ಥಾನವನ್ನು ಬಾಲಕರ ವಿಭಾಗದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಹಾಗೂ ಬಾಲಕಿಯರ ವಿಭಾಗದಲ್ಲಿ ಎಸ್.ವಿ.ಗಂಗೊಳ್ಳಿ ಕಾಲೇಜಿನ ವಿದ್ಯಾರ್ಥಿಗಳು ಪಡೆದರು.ಉಪನ್ಯಾಸಕಿ ಶ್ರೀಮತಿ ಪ್ರೀಯಾಂಕ ಜೋಸ್ ಸ್ವಾಗತಿಸಿ ಕಾರ್ಯಕ್ರಮ ಸಂಯೋಜಕರಾದ ಶ್ರೀ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ ಉಪನ್ಯಾಸಕ ಹರ್ಷ ಶೆಟ್ಟಿ ವಂದಿಸಿದರು.

   

Related Articles

error: Content is protected !!