55
ಕುಂದಾಪುರ: ಉಡುಪಿ ಜಿಲ್ಲಾ ಕ್ರೀಡಾಕೂಟಕ್ಕೆ ಆಯ್ಕೆಯಾದ ಕುಂದಾಪುರ ತಾಲೂಕಿನ ಕ್ರೀಡಾಪಟುಗಳಿಗೆ ಕುಂದಾಪುರದ ಗಾಂಧಿ ಮೈದಾನದ ಕ್ರೀಡಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಸಮವಸ್ತ್ರವನ್ನು ವಿತರಿಸಿ ಪ್ರಾಥಮಿಕವಾಗಿ ಮಕ್ಕಳಿಗೆ ಶಿಕ್ಷಣ ಜೊತೆಯಲ್ಲಿ ಕ್ರೀಡೆಯನ್ನು ತೊಡಗಿಸಿಕೊಂಡರೆ ಮುಂದೊಂದು ದಿನ ಉತ್ತಮ ಪ್ರಜೆಯಾಗಿ ಬೆಳೆಯುವುದು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೋಭಾ ಶೆಟ್ಟಿ,, ತಾಲೂಕು ಕ್ರೀಡಾಧಿಕಾರಿ ಕುಸುಮಕರ ಶೆಟ್ಟಿ ಹಾಗೂ ದೈಹಿಕ ಶಿಕ್ಷಕರು ಮತ್ತು ಕ್ರೀಡಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

