ಕುಂದಾಪುರ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕೋಡಿ ಶ್ರೀರಾಮ ವಿದ್ಯಾಕೇಂದ್ರ ಇವರ ಆಶ್ರಯದಲ್ಲಿ ವಡೇರಹೋಬಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಕೋಡಿ ಶ್ರೀರಾಮ ನಗರದ ಶ್ರೀ ರಾಮ ವಿದ್ಯಾಕೇಂದ್ರದ ಶಾಲೆಯಲ್ಲಿ ಜರುಗಿತು
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾಕೇಂದ್ರ ಸಂಚಾಲಕರಾದ ಕೆ ನಾಗೇಶ್ ಕಾಮತ್ ವಹಿಸಿದ್ದು ಪುರಸಭಾ ಸದಸ್ಯ ಮೊಹಮ್ಮದ್ ಅಶ್ಫಾಕ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು
ಮುಖ್ಯ ಅತಿಥಿಗಳಾಗಿ ಪ್ರತಿಭಾ ಕಾರಂಜಿಯ ನೋಡಲ್ ಅಧಿಕಾರಿಗಳಾದ ಶೇಖರ್ ಪಡುಕೋಣೆ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಸಂತೋಷ್ ಕುಮಾರ್ ಶೆಟ್ಟಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಗಣೇಶ್ ಕುಮಾರ್ ಶೆಟ್ಟಿ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಕಾರ್ಯದರ್ಶಿಗಳಾದ ಪಿಯೂಸ್ ಡಿಸೋಜಾ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿಗಳಾದ ಶ್ರೀನಾಥ್ ಪೂಜಾರಿ ಪತ್ರಕರ್ತರಾದ ಜಿ ರಾಘವೇಂದ್ರ ಪೈ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ ಪಾಳ್ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ರೇಖಾ ಮತ್ತು ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಶ್ರೀರಾಮ ವಿದ್ಯಾ ಕೇಂದ್ರದ ಪ್ರಾಂಶುಪಾಲರಾದ ಜಿತೇಂದ್ರ ಹಾಗೂ ವಿದ್ಯಾರ್ಥಿ ಮುಖಂಡ ಸೃಜನ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು
ಮಹೇಶ್ ವಕ್ವಾಡಿ ಮತ್ತು ಶ್ರೀಮತಿ ನಾಗರತ್ನ ಗಣೇಶ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಪ್ರಣಿತ ಸ್ವಾಗತಿಸಿ ಮಂಜುನಾಥ್ ಪಾಳ್ ಧನ್ಯವಾದವಿತ್ತರು ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಸಂತೋಷ್ ಕುಮಾರ್ ಶೆಟ್ಟಿ ಪ್ರಾಸ್ತಾವಿಸಿ ಸನ್ನಿಧಿ ಮತ್ತು ತಂಡ ಪ್ರಾರ್ಥನೆಗೈದರು ಇದೇ ಸಂದರ್ಭದಲ್ಲಿ ತೀರ್ಪುಗಾರರಾಗಿ ಆಗಮಿಸಿದ ವಿವಿಧ ಶಾಲೆಯ ಶಿಕ್ಷಕ ಶಿಕ್ಷಕಿಯವರನ್ನು ಗೌರವಿಸಲಾಯಿತು

