Home » ಸುಹಾಸ್‌ ಕೊಲೆ : ಮತ್ತಷ್ಟು ಇರಿತ ಪ್ರಕರಣಗಳ ವರದಿ
 

ಸುಹಾಸ್‌ ಕೊಲೆ : ಮತ್ತಷ್ಟು ಇರಿತ ಪ್ರಕರಣಗಳ ವರದಿ

by Kundapur Xpress
Spread the love

ಮಂಗಳೂರು : ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮೂರು ಕಡೆಗಳಲ್ಲಿ ಪ್ರತ್ಯೇಕ ಇರಿತ ಪ್ರಕರಣಗಳು ನಡೆದ ಬಗ್ಗೆ ವರದಿಯಾಗಿದೆ ನಿಷೇಧಾಜ್ಞೆ ಜಾರಿಯಲ್ಲಿರುವ ನಡುವೆಯೂ ನಡೆದಿರುವ ಈ ಬೆಳವಣಿಗೆ ಪೊಲೀಸ್ ಇಲಾಖೆಗೆ ಸವಾಲಾಗಿದೆ

ಮಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಾದ ಕಣ್ಣೂರು, ಕೊಂಚಾಡಿ ಮತ್ತು ಉಳ್ಳಾಲದಲ್ಲಿ ಪ್ರತ್ಯೇಕ ಇರಿತ ಪ್ರಕರಣಗಳು ನಡೆದಿವೆ. ಇನ್ನು ಉಡುಪಿ ಜಿಲ್ಲೆಯ ಆತ್ರಾಡಿಯಲ್ಲಿ ಕೂಡಾ ಆಟೋ ಚಾಲಕನ ಮೇಲೆ ದುಷ್ಕರ್ಮಿಗಳಿಂದ ಮಾರಕಾಯುಧಗಳಲ್ಲಿ ಹಲ್ಲೆಗೆ ಯತ್ನ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ.

ಸಧ್ಯ ಬೂದಿ ಮುಚ್ಚಿದ ಕೆಂಡದಂತಿರುವ ಕರಾವಳಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದು ಎಲ್ಲೆಡೆ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ

 

Related Articles

error: Content is protected !!