ಬೆಂಗಳೂರು : ರಾಜ್ಯದ ಇತಿಹಾಸದಲ್ಲಿ ಹದಿನಾಲ್ಕು ಬಜೆಟ್ ಮಂಡಿಸಿ ಈಗಾಗಲೇ ಸಾರ್ವಕಾಲಿಕ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 15ನೇ ಬಜೆಟ್ ಮಂಡನೆಗೆ ಸಜ್ಜಾಗುವ ಮೂಲಕ ತಮ್ಮ ದಾಖಲೆಯನ್ನೇ ಉತ್ತಮ ಪಡಿಸಿಕೊಳ್ಳಲು ಅಣಿಯಾಗಿದ್ದಾರೆ. ಲೋಕಸಭಾ ಚುನಾವಣೆ ಸಾಮೀಪ್ಯವಿರುವ ಈ ಹಂತದಲ್ಲಿ ಮುಖ್ಯಮಂತ್ರಿಯಾಗಿ ತಮ್ಮ ಎರಡನೇ ಅವಧಿಯ ಎರಡನೇ ಬಜೆಟ್ ಅನ್ನು ಶುಕ್ರವಾರ ಬೆಳಗ್ಗೆ 10.15ಕ್ಕೆ ಅವರು ಮಂಡಿಸಲಿದ್ದಾರೆ