Home ಕರಾವಳಿ ಸುದ್ದಿಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ

ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ

by Kundapur Xpress

ಬೆಂಗಳೂರು : ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ರಾಜ್ಯ ಪದಾಧಿಕಾರಿಗಳ ತಂಡ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಸಭೆ ಇಂದು ನಡೆಯಲಿದೆ. ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ಶುಕ್ರವಾರ ಕಾರ್ಯಕಾರಿಣಿ ನಡೆಯುವ ಸ್ಥಳದಲ್ಲಿನ ಸಿದ್ಧತೆಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ನಮ್ಮ ಮುಂದಿನ ಕಾರ್ಯಯೋಜನೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ

Related Articles